Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:29 - ಕನ್ನಡ ಸಮಕಾಲಿಕ ಅನುವಾದ

29 ಯಾರಿಗೆ ಕಷ್ಟ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೊಣಗುಟ್ಟುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಯಾರಿಗೆ ಕೆಂಪೇರಿದ ಕಣ್ಣುಗಳು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಕಿರಿಚಾಟ, ಕೂಗಾಟ, ಕಿತ್ತಾಟ, ಗೋಳಾಟವು ನಿರ್ನಿಮಿತ್ತ ಹುಣ್ಣು, ಕೆಂಪೇರಿದ ಕಣ್ಣು; ಇವುಗಳನ್ನು ಅನುಭವಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:29
16 ತಿಳಿವುಗಳ ಹೋಲಿಕೆ  

ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


ಅಯ್ಯೋ, ದ್ರಾಕ್ಷಾರಸ ಕುಡಿಯುವುದರಲ್ಲಿ ಶೂರರೂ, ಮದ್ಯ ಸಾಹಸಿಗಳೂ,


ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳಗಿನ ಜಾವದಲ್ಲಿ ಎದ್ದು ರಾತ್ರಿವರೆಗೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲಕಳೆಯುವವರಿಗೆ ಕಷ್ಟ!


ಏಕೆಂದರೆ ಕುಡುಕರೂ ಹೊಟ್ಟೆಬಾಕರೂ ದುರ್ಗತಿಗೆ ಬರುವರು; ತೂಕಡಿಕೆಯು ಹರಕು ಬಟ್ಟೆಗಳನ್ನು ಹೊದಿಸುವದು.


ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.


ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.


ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.


ದ್ರಾಕ್ಷಾರಸದಿಂದ ಅವನ ಕಣ್ಣುಗಳು ಕೆಂಪಾಗಿರುವವು, ಹಾಲಿನಿಂದ ಅವನ ಹಲ್ಲುಗಳು ಬಿಳುಪಾಗಿರುವವು.


ದಾವೀದನು ಅವನನ್ನು ಕರೆದಾಗ, ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ, ತನ್ನ ಯಜಮಾನನ ಸೇವಕರ ಸಂಗಡ ಮಲಗುವುದಕ್ಕೆ ಹೊರಟುಹೋದನು.


ಅತಿ ಮದ್ಯಪಾನ ಮಾಡುವವರಲ್ಲಿ ಅತಿ ಮಾಂಸಭಕ್ಷರಲ್ಲಿಯೂ ಸೇರಬೇಡ.


ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಹಿರಿಯ ಮಗಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು