Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:32 - ಕನ್ನಡ ಸಮಕಾಲಿಕ ಅನುವಾದ

32 ಕೊನೆಗೆ ಅದು ಹಾವಿನಂತೆ ಕಚ್ಚುವುದು ಮತ್ತು ಸರ್ಪದಂತೆ ವಿಷವುಕ್ಕಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಕುಡಿದಾದ ಮೇಲೆ ಅದು ಹಾವಿನಂತೆ ಕಚ್ಚುವುದು; ಹೌದು, ವಿಷಸರ್ಪದಂತೆ ಕಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗದ ಹಾಗೆ ಕಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಕೊನೆಯಲ್ಲಿ ಅದು ವಿಷದ ಹಲ್ಲುಳ್ಳ ಹಾವಿನಂತೆ ಕಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:32
18 ತಿಳಿವುಗಳ ಹೋಲಿಕೆ  

ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ, ಅಲ್ಲಿಂದ ತೆಗೆಯುವೆನು. ಅವರು ನನ್ನ ದೃಷ್ಟಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಸರ್ಪಕ್ಕೆ ಅಪ್ಪಣೆಕೊಟ್ಟು, ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.


ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.


“ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ. ಅವು ನಿಮ್ಮನ್ನು ಕಚ್ಚುವವು,” ಎಂದು ಯೆಹೋವ ದೇವರು ಹೇಳುತ್ತಾರೆ.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಹಾವಿನಂತೆ ಮೊಟ್ಟೆಗಳನ್ನು ಮರಿಮಾಡುತ್ತಾರೆ. ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ. ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು. ಒಡೆದುಬಿಡುವವನಿಗೆ ವಿಷದ ಮರಿ ಹೊರಡುವುದು.


ಕುಡುಕರಾದ ಎಫ್ರಾಯೀಮ್ಯರ ಗರ್ವದ ಕಿರೀಟವು ಕಾಲಿನ ತುಳಿತಕ್ಕೆ ಈಡಾಗುವುದು.


ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು. ಗೋಡೆಯನ್ನು ಒಡೆಯುವವನನ್ನು ಹಾವು ಕಡಿಯುವುದು.


ನಿನ್ನ ಜೀವನದ ಅಂತ್ಯದಲ್ಲಿ ನಿನ್ನ ದೇಹವೂ ಕ್ಷೀಣಿಸಿದಾಗ, ನೀನು ನರಳಬೇಕಾದೀತು.


ಅವನು ಸರ್ಪಗಳ ವಿಷವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲುವುದು.


ಅವರು ತಮ್ಮ ತಮ್ಮ ಕೋಲುಗಳನ್ನು ಬಿಸಾಡಿದಾಗ, ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ.


ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.


ಹಸುಳೆಯು ನಾಗರ ಹಾವಿನ ಹುತ್ತದ ಮೇಲೆ ಆಡುವುದು ಮತ್ತು ಪುಟ್ಟ ಮಗುವು ಹಾವಿನ ಬಿಲದ ಒಳಗೆ ಕೈ ಹಾಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು