Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:34 - ಕನ್ನಡ ಸಮಕಾಲಿಕ ಅನುವಾದ

34 ನೀನು ಸಮುದ್ರದ ಮಧ್ಯದಲ್ಲಿ ಮಲಗಿರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀನು ಸಮುದ್ರದ ನಡುವೆಯಾಗಲಿ, ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೀನು ಸಮುದ್ರ ಮಧ್ಯದಲ್ಲಿ ಮಲಗಿ ಇರುವವನಂತೆ ಇರುವೆ, ಹಡಗಿನ ಕಂಬದ ತುದಿಯಲ್ಲಿ ನಿದ್ರಿಸುವವನಂತೆ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀನು ಸಮುದ್ರದ ನಡುವೆಯಾಗಲಿ ಹಡಗಿನ ಕಂಬದ ತುದಿಯಲ್ಲಾಗಲಿ ಮಲಗಿರುವವನಂತೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನೀನು ಮಲಗಿಕೊಂಡಾಗ ಸಮುದ್ರದ ಅಲ್ಲೋಲಕಲ್ಲೋಲ ಅಲೆಗಳ ಮೇಲಿರುವಂತೆಯೂ ಹಡಗಿನ ಮೇಲೆ ಮಲಗಿಕೊಂಡಿರುವಂತೆಯೂ ನಿನಗನ್ನಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:34
14 ತಿಳಿವುಗಳ ಹೋಲಿಕೆ  

“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಪ್ರಳಯವು ಬರುವುದಕ್ಕಿಂತ ಮುಂಚಿನ ಆ ದಿವಸಗಳಲ್ಲಿ, ನೋಹನು ನಾವೆಯಲ್ಲಿ ಸೇರಿದ ದಿವಸದವರೆಗೆ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು.


ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.


ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.


ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.


ನೀವು ಬೀಸಿದ ಬಿರುಸಾದ ಗಾಳಿಯಿಂದ ನೀರು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು. ಜಲರಾಶಿಗಳು ಸಮುದ್ರದ ಮಧ್ಯದಲ್ಲಿ ಗಟ್ಟಿಯಾದವು.


ನಿಮ್ಮ ಕಣ್ಣುಗಳು ವಿಚಿತ್ರ ದೃಶ್ಯಗಳನ್ನು ನೋಡುತ್ತವೆ. ನಿಮ್ಮ ಮನಸ್ಸು ಗೊಂದಲಮಯ ವಿಷಯಗಳನ್ನು ಕಲ್ಪಿಸುತ್ತದೆ.


“ಜನರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ನಾನು ಎಚ್ಚರವಾಗುವುದು ಯಾವಾಗ? ಪುನಃ ನಾನು ಅದನ್ನು ಕುಡಿದೇನು?” ಎಂದುಕೊಳ್ಳುವೆ.


ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು