Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:6 - ಕನ್ನಡ ಸಮಕಾಲಿಕ ಅನುವಾದ

6 ಜಿಪುಣನ ಆಹಾರವನ್ನು ತಿನ್ನಬೇಡ; ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜಿಪುಣ ದೃಷ್ಟಿಯವನು ಬಡಿಸುವ ಅನ್ನವನ್ನು ಉಣಬೇಡ; ಅವನ ರುಚಿಪದಾರ್ಥಗಳನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಲೋಭಿಯ ಅನ್ನವನು ಉಣ್ಣದಿರು; ಅವನ ರುಚಿಪದಾರ್ಥಗಳನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸ್ವಾರ್ಥಿಯೊಂದಿಗೆ ಊಟಮಾಡಬೇಡ. ಅವನು ಇಷ್ಟಪಡುವ ಮೃಷ್ಠಾನ್ನದಿಂದ ದೂರವಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:6
9 ತಿಳಿವುಗಳ ಹೋಲಿಕೆ  

ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿಸಬೇಡ; ಏಕೆಂದರೆ ಅದು ಮೋಸದ ಆಹಾರವು.


ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು ಕೆಟ್ಟ ಕಾರ್ಯಗಳನ್ನು ಮಾಡಲು ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ.


“ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.


ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.


ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.


ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.


ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವಳೂ, ಬಹಳ ಸೂಕ್ಷ್ಮ ಗುಣವುಳ್ಳವಳೂ, ನೆಲಕ್ಕೆ ಅಂಗಾಲನ್ನು ಸಹ ಇಡದ ಮಹಿಳೆಯು, ತನ್ನ ಮಗ್ಗುಲಲ್ಲಿರುವ ಗಂಡನ ಕಡೆಗೂ ಹೆತ್ತ ಪುತ್ರಪುತ್ರಿಯರ ಕಡೆಗೂ ಕಠಿಣವಾಗಿರುವಳು.


ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು