Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:7 - ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ, ಅವನು ಎಲ್ಲದಕ್ಕೂ ಬೆಲೆ ಕಟ್ಟುವ ಯೋಚನೆಯುಳ್ಳವನಂತೆ ಇದ್ದಾನೆ; ಅವನು, “ತಿನ್ನು, ಕುಡಿ,” ಎಂದು ಹೇಳುತ್ತಾನೆ; ಆದರೆ ಅವನ ಹೃದಯವು ನಿನ್ನೊಂದಿಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನು ತನ್ನ ಮನದಲ್ಲೆ ಲೆಕ್ಕಿಸುತ್ತಿರುತ್ತಾನೆ “ಉಣ್ಣು, ಕುಡಿ” ಎಂದರೂ; ಅವನಿಗಿಲ್ಲ ನಿನ್ನ ಮೇಲೆ ಅಕ್ಕರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ; ಉಣ್ಣು, ಕುಡಿ, ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನು ವೆಚ್ಚದ ಬಗ್ಗೆ ಯೋಚಿಸುವಂಥವನು. ಅವನು ನಿನಗೆ, “ತಿನ್ನು, ಕುಡಿ” ಎಂದು ಹೇಳಿದರೂ ಅವನ ಉದ್ದೇಶವೇ ಬೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:7
12 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.


ಅವನ ಬಾಯಿಯ ಮಾತುಗಳು ಬೆಣ್ಣೆಗಿಂತ ನುಣ್ಣಗಾಗಿವೆ; ಆದರೆ ಅವನ ಹೃದಯದಲ್ಲಿ ಕಾಳಗವಿದೆ; ಅವನ ಮಾತುಗಳು ಎಣ್ಣೆಗಿಂತ ನಯವಾಗಿವೆ; ಆದರೆ ಅವು ಬಿಚ್ಚುಗತ್ತಿಗಳಾಗಿವೆ.


ಅವಳು ಅವನಿಗೆ, “ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ, ನಿನ್ನನ್ನು ಪ್ರೀತಿಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆ ಮಾಡಿದೆ; ನಿನ್ನ ದೊಡ್ಡ ಶಕ್ತಿಯ ರಹಸ್ಯ ಯಾವುದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ,” ಎಂದಳು.


ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. ಬಡವನು ಸುಳ್ಳುಗಾರನಿಗಿಂತ ಲೇಸು.


ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.


ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು.


ಶತ್ರುಗಳು ತಮ್ಮ ತುಟಿಗಳಿಂದ ವೇಷ ಧರಿಸುತ್ತಾರೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾರೆ.


ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.


ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು, ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು