Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:1 - ಕನ್ನಡ ಸಮಕಾಲಿಕ ಅನುವಾದ

1 ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆ ಪಡದಿರು; ಇಲ್ಲವೆ ಅವರ ಸಂಗಡ ಇರುವುದಕ್ಕೆ ಅಪೇಕ್ಷಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ. ಅವರ ಒಡನಾಟವನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆಡುಕರ ವಿಷಯದಲ್ಲಿ ಹೊಟ್ಟೆಕಿಚ್ಚುಪಡಬೇಡ; ಅವರೊಂದಿಗಿರಲು ಅಪೇಕ್ಷಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:1
16 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.


ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೆಕಿಚ್ಚುಪಡಬೇಡ; ಅವನ ಮಾರ್ಗಗಳಲ್ಲಿ ಯಾವುದನ್ನೂ ನೀನು ಆರಿಸಿಕೊಳ್ಳಬೇಡ.


ಪಾಪಿಗಳನ್ನು ನೋಡಿ ನಿನ್ನ ಹೃದಯವು ಅಸೂಯೆಪಡದಿರಲಿ; ಆದರೆ ಯೆಹೋವ ದೇವರ ಭಯದಲ್ಲಿರಲು ಯಾವಾಗಲೂ ಆಸಕ್ತನಾಗಿರು.


ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.


ಏಕೆಂದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡಾಗ ಮೂರ್ಖರ ಮೇಲೆ ಹೊಟ್ಟೆಕಿಚ್ಚುಪಟ್ಟೆನು.


ಕೆಟ್ಟವರನ್ನು ನೋಡಿ ಕೋಪಿಸಿಕೊಳ್ಳಬೇಡ. ಇಲ್ಲವೆ ಅಕ್ರಮ ಮಾಡುವವರ ಬಗ್ಗೆ ಹೊಟ್ಟೆಕಿಚ್ಚುಪಡಬೇಡ.


ಕೆಟ್ಟವರನ್ನು ಕಂಡು ಉರಿಗೊಳ್ಳಬೇಡ; ಇಲ್ಲವೆ ದುಷ್ಟರನ್ನು ಕಂಡು ಅಸೂಯೆಪಡಬೇಡ.


ಪಾಪಿಗಳ ಸಂಗಡ ನನ್ನ ಪ್ರಾಣವನ್ನೂ, ರಕ್ತಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡಿರಿ.


ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,


ದುಷ್ಟರ ದಾರಿಯೊಳಗೆ ನೀನು ಪ್ರವೇಶಿಸದಿರು ಕೆಟ್ಟವರ ಮಾರ್ಗದಲ್ಲಿ ನೀನು ಹೋಗಬೇಡ.


ಆ ದಾರಿಯಿಂದ ತೊಲಗು, ಅದರ ಪಕ್ಕದಲ್ಲಿ ಹಾದು ಹೋಗಬೇಡ; ಅದರಿಂದ ತಪ್ಪಿಸಿಕೊಂಡು, ನಿನ್ನ ಮಾರ್ಗದಲ್ಲಿ ಮುಂದೆ ನಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು