Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:24 - ಕನ್ನಡ ಸಮಕಾಲಿಕ ಅನುವಾದ

24 ಯಾವನು ದುಷ್ಟನಿಗೆ, “ನೀನು ನೀತಿವಂತನು” ಎಂದು ಹೇಳುತ್ತಾನೋ ಅವನನ್ನು ಜನರು ಶಪಿಸುವರು; ಜನಾಂಗಗಳು ಅವನನ್ನು ದೂಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ, ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಪರಾಧಿಗೆ “ನೀನು ನಿರಪರಾಧಿ” ಎಂದು ತೀರ್ಪು ಕೊಡುವವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾವನು ಅಧರ್ಮಿಗೆ - ನೀನು ಧರ್ಮಾತ್ಮ ಎಂದು ಹೇಳುತ್ತಾನೋ ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನ್ಯಾಯಾಧೀಶನು ಅಪರಾಧಿಗೆ, “ನೀನು ನಿರಪರಾಧಿ” ಎಂದು ಹೇಳಿದರೆ, ಜನರು ನ್ಯಾಯಾಧೀಶನನ್ನು ಶಪಿಸುವರು; ಜನಾಂಗಗಳು ಅವನನ್ನು ಖಂಡಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:24
11 ತಿಳಿವುಗಳ ಹೋಲಿಕೆ  

ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ.


ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ, ನೀತಿಯನ್ನು ನೀತಿವಂತನಿಂದ ತೆಗೆದು ಹಾಕುವವರಿಗೂ ಕಷ್ಟ!


ಧಾನ್ಯವನ್ನು ಬಚ್ಚಿಟ್ಟುಕೊಳ್ಳುವವನನ್ನು ಜನರು ಶಪಿಸುವರು; ಆದರೆ ಅದನ್ನು ಮಾರುವವನ ಮೇಲೆ ಆಶೀರ್ವಾದವು ನೆಲೆಯಾಗಿರುವುದು.


ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.


ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.


“ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹಮಾಡಿದ ಮನುಷ್ಯರ ಹೆಣಗಳನ್ನು ನೋಡುವರು. ಅವುಗಳನ್ನು ಕಡಿಯುವ ಹುಳ ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ, ಅವರು ಎಲ್ಲಾ ಮನುಷ್ಯರಿಗೆ ಹೇಸಿಗೆಯಾಗುವರು.”


ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ!


“ಕೆಲಸಗಾರರ ವಿಷಯವಾಗಿ ಅವನ ಯಜಮಾನನಿಗೆ ದೂರು ಹೇಳಬೇಡ; ಇದರಿಂದ ಆ ಕೆಲಸಗಾರ ನಿನ್ನನ್ನು ಶಪಿಸಾನು, ಆಗ ನೀನು ದೋಷಿಯಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು