Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:14 - ಕನ್ನಡ ಸಮಕಾಲಿಕ ಅನುವಾದ

14 ದಾನ ಕೊಡದೆ ಕೊಟ್ಟಿದ್ದೇನೆಂದು ಹೊಗಳಿಕೊಳ್ಳುವವನು, ಮಳೆ ಇಲ್ಲದ ಮೋಡಗಳ ಮತ್ತು ಗಾಳಿಯ ಹಾಗೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬರೀ ಗಾಳಿಯ ಮೋಡಗಳು ಹೇಗೋ, ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗಾಳಿಯಿದೆ, ಮೋಡವಿದೆ, ಆದರೆ ಮಳೆಯಿಲ್ಲ; ಕೊಡದೆಯೆ ತಾನೊಬ್ಬ ದಾನಿಯೆಂದು ಕೊಚ್ಚಿಕೊಳ್ಳುವವನೂ ಹಾಗೆಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬರೀ ಗಾಳಿ ಮೋಡಗಳು ಹೇಗೋ ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾನ ಮಾಡುವುದಾಗಿ ಹೇಳಿಯೂ ಮಾಡದವರು ಮಳೆಯನ್ನು ತಾರದ ಮೋಡಗಳಂತೆಯೂ ಗಾಳಿಯಂತೆಯೂ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:14
11 ತಿಳಿವುಗಳ ಹೋಲಿಕೆ  

ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?


ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ನಮ್ಮ ಕರ್ತ ಯೇಸುವಿನ ದೇವರೂ ತಂದೆಯೂ ನಾನು ಸುಳ್ಳು ಹೇಳುವುದಿಲ್ಲ ಎಂಬುದನ್ನು ಬಲ್ಲವರಾಗಿದ್ದಾರೆ. ಅವರಿಗೇ ನಿತ್ಯವೂ ಸ್ತುತಿ ಸಲ್ಲಲಿ.


ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಪ್ರವಾದಿಗಳು ಆಡುವುದೆಲ್ಲಾ ಬರೀ ಗಾಳಿ ಮಾತುಗಳು, ದೈವೋಕ್ತಿ ಎಂಬುದು ಅವುಗಳಲ್ಲಿ ಇಲ್ಲ, ಅವರು ಹೇಳುವುದೆಲ್ಲಾ ಅವರಿಗೇ ತಗಲಲಿ,” ಎಂದುಕೊಂಡಿದ್ದಾರೆ.


ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು