Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:16 - ಕನ್ನಡ ಸಮಕಾಲಿಕ ಅನುವಾದ

16 ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟೇ ತಿನ್ನು; ಹೊಟ್ಟೆ ತುಂಬಾ ತಿಂದರೆ ಕಾರಬೇಕಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜೇನು ಸಿಕ್ಕಿತೋ? ಮಿತವಾಗಿ ತಿನ್ನು, ಹೊಟ್ಟೆತುಂಬಾ ತಿಂದರೆ ಕಾರಿಬಿಟ್ಟೀಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜೇನು ಸಿಕ್ಕಿದರೆ ಅಳತೆಯಿಂದ ತಿನ್ನು, ಮಿತಿಮೀರಿದರೆ ವಾಂತಿಯಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಜೇನು ಸಿಕ್ಕಿತೋ? ವಿುತವಾಗಿ ತಿನ್ನು, ಹೊಟ್ಟೆತುಂಬ ತಿಂದರೆ ಕಾರಿಬಿಟ್ಟೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜೇನುತುಪ್ಪ ಒಳ್ಳೆಯದು. ಆದರೆ ಅತಿಯಾಗಿ ತಿನ್ನಬೇಡ. ಇಲ್ಲವಾದರೆ, ಕಾಯಿಲೆಬೀಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:16
11 ತಿಳಿವುಗಳ ಹೋಲಿಕೆ  

ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು.


ಆ ಮಗು ಬೆಳೆದು, ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನನ್ನು ತಿನ್ನುವುದು.


ನೀನು ತಿಂದ ಸ್ವಲ್ಪ ತುತ್ತನ್ನು ಕಕ್ಕಿಬಿಡುವೆ; ನಿನ್ನ ಸವಿಮಾತುಗಳೆಲ್ಲಾ ವ್ಯರ್ಥವೇ.


ನಿನ್ನ ನೆರೆಯವನ ಮನೆಗೆ ಅಪರೂಪಕ್ಕೆ ಹೆಜ್ಜೆ ಇಡು; ಇಲ್ಲವಾದರೆ ನಿನ್ನ ವಿಷಯವಾಗಿ ಅವನು ಬೇಸರಗೊಂಡು ನಿನ್ನನ್ನು ಹಗೆಮಾಡಾನು.


ನೀನು ಅತಿಯಾಗಿ ನೀತಿವಂತನಾಗಿರಬೇಡ. ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿಯೂ ಮಾಡಿಕೊಳ್ಳಬೇಡ. ನಿನ್ನನ್ನು ನೀನೇ ಏಕೆ ನಾಶಪಡಿಸಿಕೊಳ್ಳುವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು