ಜ್ಞಾನೋಕ್ತಿಗಳು 25:22 - ಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹೀಗೆ ಅವನ ತಲೆಯ ಮೇಲೆ ಉರಿಕೆಂಡ ಸುರಿವೆ; ಸರ್ವೇಶ್ವರನಿಂದಲೂ ಪ್ರತಿಫಲ ಪಡೆಯುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೀಗೆ ಅವನ ತಲೆಯ ಮೇಲೆ ಕೆಂಡಸುರಿದಂತಾಗುವದು; ಯೆಹೋವನೇ ನಿನಗೆ ಪ್ರತಿಫಲಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೋಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು. ಅಧ್ಯಾಯವನ್ನು ನೋಡಿ |
ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.