Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:23 - ಕನ್ನಡ ಸಮಕಾಲಿಕ ಅನುವಾದ

23 ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮಳೆ ಬರುವುದು ಪಡುವಣ ಗಾಳಿಯಿಂದ; ಮುಖಕ್ಕೆ ಸಿಟ್ಟು ಬರುವುದು ಚಾಡಿ ನಾಲಿಗೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಡಗಣಗಾಳಿ ಮಳೆ ಬರಮಾಡುವದು; ಚಾಡಿಯ ನಾಲಿಗೆ ಕೋಪದ ಮುಖ ಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:23
8 ತಿಳಿವುಗಳ ಹೋಲಿಕೆ  

ನಾನು ಬಂದಾಗ ಒಂದು ವೇಳೆ ನೀವು ನನ್ನ ಮನಸ್ಸಿನ ತೋರಿಕೆಯ ಪ್ರಕಾರ ಇರುವುದಿಲ್ಲವೋ ಏನೋ? ನಾನು ನಿಮ್ಮ ಇಷ್ಟದ ಪ್ರಕಾರ ತೋರದೆ ಇರಬಹುದು. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ಕೋಪ, ಭೇದಗಳು, ಚಾಡಿ ಹೇಳುವುದು, ಹರಟೆ ಹೊಡೆಯುವುದು, ಉಬ್ಬಿಕೊಳ್ಳುವುದು, ಕಲಹ ಎಬ್ಬಿಸುವುದು, ಇವುಗಳು ಕಾಣಬರುವುದೋ ಎಂಬ ಭಯ ನನಗೆ ಉಂಟು.


ಅವರು ಕಿವಿ ಊದುವವರೂ ಚಾಡಿಹೇಳುವವರೂ ದೇವರನ್ನು ದ್ವೇಷಿಸುವವರೂ ಸೊಕ್ಕಿನವರೂ ಅಹಂಕಾರಿಗಳೂ ಬಡಾಯಿ ಕೊಚ್ಚುವವರೂ ಕೇಡನ್ನು ಕಲ್ಪಿಸುವವರೂ ತಂದೆತಾಯಿಗಳ ಮಾತನ್ನು ಕೇಳದವರೂ


ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿಹೋಗುತ್ತದೆ; ಹಾಗೆಯೇ ಚಾಡಿಕೋರನು ಇಲ್ಲದಿರುವಲ್ಲಿ ಜಗಳ ಶಮನವಾಗುವುದು.


ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ, ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ, ಇತರರನ್ನು ನಿಂದಿಸುವುದೂ ಇಲ್ಲ;


ಉತ್ತರದಿಂದ ಹೊನ್ನಿನ ಹೊಳಪು ಬರುತ್ತದೆ; ಅದರಂತೆಯೇ ದೇವರ ವಿಸ್ಮಯ ತೇಜಸ್ಸಿನಿಂದ ಬರುತ್ತಾರೆ.


ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು.


ಔತಣಗಳಲ್ಲಿ ಗೇಲಿಮಾಡುವ ಕಪಟಿಗಳಂತೆ ಅವರು ನನ್ನ ಮೇಲೆ ಹಲ್ಲುಗಳನ್ನು ಕಡಿಯುತ್ತಾರೆ.


ದಕ್ಷಿಣದಿಕ್ಕಿನಿಂದ ಬಿರುಗಾಳಿಯು ಬೀಸುತ್ತದೆ. ಉತ್ತರದಿಂದ ಚಳಿಯೂ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು