Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:4 - ಕನ್ನಡ ಸಮಕಾಲಿಕ ಅನುವಾದ

4 ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ರೂಪಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ದಕ್ಕುವುದು ಚೊಕ್ಕ ಒಡವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿ ಶುದ್ಧಗೊಳಿಸಿದರೆ, ಅಕ್ಕಸಾಲಿಗನು ಅದರಿಂದ ಸುಂದರವಾದ ವಸ್ತುಗಳನ್ನು ಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:4
9 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ ಕಸದ ಹಾಗಾದರೂ, ಅವರೆಲ್ಲರೂ ಗುಹೆಯಲ್ಲಿರುವ ತಾಮ್ರ, ತವರ, ಕಬ್ಬಿಣದ ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಸದ ಹಾಗೆಯೂ ಇದ್ದಾರೆ.


ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಆಕಾಶದ ಎತ್ತರವನ್ನು, ಭೂಮಿಯ ಆಳವನ್ನು ಯಾರೂ ಗ್ರಹಿಸಲು ಸಾಧ್ಯವಿಲ್ಲ. ಹಾಗೆಯೇ ಅರಸರ ಹೃದಯವು ಅಗೋಚರ.


ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು, ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ.


ದೇವರೇ, ನೀವು ನಮ್ಮನ್ನು ಪರಿಶೋಧಿಸಿದ್ದೀರಿ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶುದ್ಧೀಕರಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು