Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:1 - ಕನ್ನಡ ಸಮಕಾಲಿಕ ಅನುವಾದ

1 ಬೇಸಿಗೆಯಲ್ಲಿ ಹಿಮದಂತೆಯೂ, ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನವು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ, ಮೂಢನಿಗೆ ಮಾನವು ಹಾಗೆ ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೇಸಿಗೆಯಲ್ಲಿ ಮಂಜು ಬೀಳುತ್ತದೆಯೇ? ಸುಗ್ಗಿಯಲ್ಲಿ ಮಳೆ ಬರುತ್ತದೆಯೇ? ಹಾಗೆಯೆ ಬುದ್ಧಿಹೀನನಿಗೆ ತೋರುವ ಮಾನಮರ್ಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ ಮೂಢನಿಗೆ ಮಾನ ಹಾಗೆ ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೂಢನನ್ನು ಗೌರವಿಸುವುದು ಸರಿಯಲ್ಲ. ಅದು ಬೇಸಿಗೆಕಾಲದಲ್ಲಿ ಬೀಳುವ ಹಿಮದಂತೆಯೂ ಸುಗ್ಗೀಕಾಲದಲ್ಲಿ ಬೀಳುವ ಮಳೆಯಂತೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:1
16 ತಿಳಿವುಗಳ ಹೋಲಿಕೆ  

ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ.


ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು. ಆದರೆ ಲೋಭವನ್ನು ಹಗೆಮಾಡುವವನು ದೀರ್ಘಾಯುಷ್ಯನು.


ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ, ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು.


ಮೂಢನಿಗೆ ಕೊಡುವ ಮಾನವು ಕವಣಿಯಲ್ಲಿಟ್ಟ ಕಲ್ಲಿನ ಹಾಗೆ.


ಉತ್ತಮವಾದ ಪದಗಳು ಮೂರ್ಖನಿಗೆ ಸೂಕ್ತವಲ್ಲ; ಆಳುವವನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಆಯುಕ್ತವಲ್ಲವೇ.


ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.


ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.


ಆಗ ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು.


ಹಾಗೆಯೇ ಹತಾಕನು ಅರಸನ ಅರಮನೆಯ ಬಾಗಿಲ ಮುಂದೆ ಪಟ್ಟಣದ ಬೀದಿಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೋದನು.


ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿ ಹೊರಟು ಶೆಕೆಮಿನ ಹಿರಿಯರನ್ನೂ, ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನರಿಂದಲೂ, ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ,” ಎಂದನು.


ಯೋತಾಮನಿಗೆ ಇದನ್ನು ತಿಳಿಸಿದಾಗ, ಅವನು ಹೋಗಿ ಗೆರಿಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು, ತನ್ನ ಸ್ವರವನ್ನೆತ್ತಿ ಕೂಗಿ ಅವರಿಗೆ, “ಶೆಕೆಮಿನ ಹಿರಿಯರೇ, ದೇವರು ನಿಮ್ಮನ್ನು ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.


ಕುದುರೆಗೆ ಬಾರುಗೋಲು, ಕತ್ತೆಗೆ ಕಡಿವಾಣವು, ಮೂಢನ ಬೆನ್ನಿಗೆ ಬೆತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು