Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:17 - ಕನ್ನಡ ಸಮಕಾಲಿಕ ಅನುವಾದ

17 ಒಬ್ಬನು ಹಾದುಹೋಗುತ್ತಾ ತನಗೆ ಸಂಬಂಧಿಸದೇ ಇರುವ ವ್ಯಾಜ್ಯದಲ್ಲಿ ತಲೆಹಾಕುವವನು ನಾಯಿಯ ಕಿವಿ ಹಿಡಿದವನಂತೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬೇರೆಯವರ ವ್ಯಾಜ್ಯದಲ್ಲಿ ತಲೆಹಾಕುವವನು ಬೀದಿ ನಾಯಿಯ ಬಾಲ ಎಳೆದ ದಾರಿಹೋಕನಿಗೆ ಸಮಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವದು ನಾಯಿಯನ್ನು ಕಿವಿಹಿಡಿದ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬೇರೆಯವರ ವಾಗ್ವಾದದಲ್ಲಿ ಮಧ್ಯೆ ಪ್ರವೇಶಿಸಲು ಮಾಡುವ ಪ್ರಯತ್ನ ಹಾದಿಯಲ್ಲಿ ಹೋಗುತ್ತಿರುವ ನಾಯಿಯ ಕಿವಿಗಳನ್ನು ಹಿಡಿದುಕೊಳ್ಳುವಷ್ಟೇ ಅಪಾಯಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:17
7 ತಿಳಿವುಗಳ ಹೋಲಿಕೆ  

ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.


ಯೇಸು, “ಸ್ನೇಹಿತನೇ, ನಿಮ್ಮ ಮೇಲೆ ನ್ಯಾಯಾಧಿಪತಿಯಾಗಿ ಇಲ್ಲವೆ ನಿಮಗೆ ಭಾಗಮಾಡಿಕೊಡುವುದಕ್ಕೆ ನನ್ನನ್ನು ನೇಮಿಸಿದವರು ಯಾರು?” ಎಂದು ಹೇಳಿದರು.


ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.


ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು.


ಒಬ್ಬನು ನಿನಗೆ ಯಾವ ತೊಂದರೆ ಮಾಡದಿದ್ದರೆ, ಅವನೊಂದಿಗೆ ಕಾರಣವಿಲ್ಲದೆ ದೂರು ನುಡಿಯಬೇಡ.


ತನ್ನ ನೆರೆಯವನನ್ನು ಮೋಸಗೊಳಿಸಿ, “ಇದು ತಮಾಷೆಗೋಸ್ಕರ ಮಾಡುತ್ತೇನೆ,” ಎಂದು ಹೇಳುವವನು, ಕೊಳ್ಳಿಗಳನ್ನೂ, ಬಾಣಗಳನ್ನೂ, ಸಾವನ್ನೂ ಬೀರುವ ಹುಚ್ಚನಂತೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು