Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:20 - ಕನ್ನಡ ಸಮಕಾಲಿಕ ಅನುವಾದ

20 ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿಹೋಗುತ್ತದೆ; ಹಾಗೆಯೇ ಚಾಡಿಕೋರನು ಇಲ್ಲದಿರುವಲ್ಲಿ ಜಗಳ ಶಮನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸೌದೆಯಿಲ್ಲದಿದ್ದರೆ ಬೆಂಕಿ ಆರುವುದು; ಚಾಡಿಕೋರನಿಲ್ಲದಿದ್ದರೆ ಜಗಳ ಶಮನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವದು; ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸೌದೆ ಇಲ್ಲದಿದ್ದರೆ ಬೆಂಕಿಯು ಆರಿಹೋಗುವುದು. ಅಂತೆಯೇ ಹುರುಳಿಲ್ಲದ ವಾಗ್ವಾದ ನಿಂತುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:20
6 ತಿಳಿವುಗಳ ಹೋಲಿಕೆ  

ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.


ಪರಿಹಾಸ್ಯ ಮಾಡುವವನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವುದು; ವಿವಾದವೂ ನಿಂದೆಯೂ ನಿಂತುಹೋಗುವುವು.


ಮೂರ್ಖನು ಜಗಳವನ್ನು ಬಿತ್ತುತ್ತಾನೆ. ಚಾಡಿಕೋರನು ಪ್ರಮುಖ ಸ್ನೇಹಿತರನ್ನು ಅಗಲಿಸುತ್ತಾನೆ.


ಚಾಡಿಕೋರನ ಮಾತುಗಳು ರುಚಿಕರ ಭಕ್ಷ್ಯದ ಹಾಗೆ ಹೊಟ್ಟೆಯ ಅಂತರ್ಭಾಗಗಳಿಗೆ ಇಳಿಯುತ್ತವೆ.


ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಸಣ್ಣ ಬೆಂಕಿ ಕಿಡಿಯು ದೊಡ್ಡಕಾಡನ್ನೇ ಸುಟ್ಟುಬಿಡುತ್ತದೆ ನೋಡಿರಿ.


“ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು