Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:24 - ಕನ್ನಡ ಸಮಕಾಲಿಕ ಅನುವಾದ

24 ಶತ್ರುಗಳು ತಮ್ಮ ತುಟಿಗಳಿಂದ ವೇಷ ಧರಿಸುತ್ತಾರೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹಗೆಗಾರನ ತುಟಿಯಲ್ಲಿ ಸ್ನೇಹಭಾವದ ನಟನೆ; ಹೊಟ್ಟೆಯಲ್ಲಾದರೊ ಹುದುಗಿದೆ ವಂಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹಗೆಯವನು ತುಟಿಯಲ್ಲಿ ಸ್ನೇಹಭಾವವನ್ನು ನಟಿಸುತ್ತಾನೆ. ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕೆಡುಕನು ತಾನು ಹೇಳುವ ಸಂಗತಿಗಳ ಮೂಲಕ ತನ್ನನ್ನು ಒಳ್ಳೆಯವನನ್ನಾಗಿ ತೋರಿಸಿಕೊಳ್ಳುವನು. ಆದರೆ ಅವನು ತನ್ನ ಕೆಟ್ಟ ಆಲೋಚನೆಗಳನ್ನು ತನ್ನ ಹೃದಯದಲ್ಲಿ ಅಡಗಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:24
17 ತಿಳಿವುಗಳ ಹೋಲಿಕೆ  

ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.


ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ ಮತ್ತು ಚಾಡಿ ಹೇಳುವವನು ಮೂರ್ಖನು.


ನನ್ನನ್ನು ನೋಡುವುದಕ್ಕೆ ಅವರಲ್ಲಿ ಒಬ್ಬನು ಬಂದರೆ, ಕಪಟವಾಗಿ ಮಾತನಾಡುತ್ತಾನೆ. ಅವನ ಹೃದಯ ಕೇಡನ್ನು ಕೂಡಿಟ್ಟುಕೊಳ್ಳುತ್ತಿದೆ. ಅವನು ಹೊರಗೆ ಹೋದ ಮೇಲೆ ಕೇಡನ್ನು ಹಬ್ಬಿಸುತ್ತಾನೆ.


ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. ಮೂಢರ ಬುದ್ಧಿಹೀನತೆಯು ಮೋಸಕರ.


ಒಬ್ಬ ಪ್ರಾಮಾಣಿಕ ಸಾಕ್ಷಿ ಸತ್ಯವನ್ನು ಹೇಳುತ್ತಾನೆ, ಆದರೆ ಸುಳ್ಳುಸಾಕ್ಷಿಯು ಸುಳ್ಳನ್ನು ಹೇಳುತ್ತಾನೆ.


ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.


ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ.


ಏಕೆಂದರೆ, ಅವನು ಎಲ್ಲದಕ್ಕೂ ಬೆಲೆ ಕಟ್ಟುವ ಯೋಚನೆಯುಳ್ಳವನಂತೆ ಇದ್ದಾನೆ; ಅವನು, “ತಿನ್ನು, ಕುಡಿ,” ಎಂದು ಹೇಳುತ್ತಾನೆ; ಆದರೆ ಅವನ ಹೃದಯವು ನಿನ್ನೊಂದಿಗಿಲ್ಲ.


“ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು.


ಆಗ ಯಾಕೋಬನ ಮಕ್ಕಳು ಶೆಕೆಮನಿಗೂ, ಅವನ ತಂದೆ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಏಕೆಂದರೆ ಅವನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದನು.


ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು.


ಆಗ ಅಬ್ಷಾಲೋಮನು, “ಹಾಗಾದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ,” ಎಂದನು. ಅರಸನು ಅವನಿಗೆ, “ಏಕೆ ಅವನು ನಿಮ್ಮ ಸಂಗಡ ಬರಬೇಕು?” ಎಂದನು.


ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅಮ್ನೋನನನ್ನೂ, ಅರಸನ ಸಮಸ್ತ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.


ಆಗ ಯೋವಾಬನು ಅಮಾಸನಿಗೆ, “ನನ್ನ ಸಹೋದರನೇ, ಕ್ಷೇಮವೋ?” ಎಂದನು. ಯೋವಾಬನು ಅವನನ್ನು ಮುದ್ದಿಟ್ಟುಕೊಳ್ಳಲು ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು.


ಸನ್ಬಲ್ಲಟನೂ, ಗೆಷೆಮನೂ ನನಗೆ, “ಓನೋ ಎಂಬ ಬಯಲಿನಲ್ಲಿರುವ ಗ್ರಾಮಗಳಲ್ಲಿ ಎದುರುಗೊಳ್ಳೋಣ ಬಾ,” ಎಂದರು. ಆದರೆ ಅವರು ನನಗೆ ಕೇಡು ಮಾಡಲು ಯೋಜಿಸಿಕೊಂಡಿದ್ದರು.


ಹೊಗಳಿಕೆಯ ಎಲ್ಲಾ ತುಟಿಗಳನ್ನೂ ಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ.


ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು