Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:5 - ಕನ್ನಡ ಸಮಕಾಲಿಕ ಅನುವಾದ

5 ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು, ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೂಢನಿಗೆ ಅವನ ಮೂರ್ಖತನ ತಿಳಿಯುವಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು; ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೂಢನಿಗೆ ಅವನ ಮೂಢತನದ ಮಟ್ಟದಲ್ಲಿ ಉತ್ತರಿಸು; ಇಲ್ಲವಾದರೆ ಅವನು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:5
19 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.


ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು.


ಈ ಸಾಕ್ಷಿಯು ನಿಜವೇ. ಇದರ ದೆಸೆಯಿಂದ ಅವರು ನಂಬಿಕೆಯಲ್ಲಿ ಸ್ವಸ್ಥರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು.


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು.


ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.


ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನೂ ಅವನಿಗೆ ಸಮಾನನಾದೀಯೆ.


ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.


ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳು ತಮ್ಮ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳು ಆಗಿರುವವರಿಗೆ ಕಷ್ಟ!


ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ತನ್ನ ಪಾದಗಳನ್ನು ತಾನೇ ಕಡಿದುಕೊಂಡು ಇಲ್ಲವೆ ಕೇಡನ್ನು ಕುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು