ಜ್ಞಾನೋಕ್ತಿಗಳು 27:18 - ಕನ್ನಡ ಸಮಕಾಲಿಕ ಅನುವಾದ18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು, ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಯಜಮಾನನ ಮಾತಿಗೆ ಕಾಯುವವನು ಮಾನವನ್ನನುಭವಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.