Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:2 - ಕನ್ನಡ ಸಮಕಾಲಿಕ ಅನುವಾದ

2 ನಿನ್ನ ಬಾಯಿ ಅಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ, ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಬಾಯಿ ಅಲ್ಲ, ಬೇರೆಯವರು ಹೊಗಳಲಿ ನಿನ್ನ; ಆತ್ಮಸ್ತುತಿ ಸಲ್ಲ, ಅನ್ಯರು ಸ್ತುತಿಸಲಿ ನಿನ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ; ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ; ಬೇಕಿದ್ದರೆ ಬೇರೆಯವರೇ ನಿನ್ನನ್ನು ಹೊಗಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:2
7 ತಿಳಿವುಗಳ ಹೋಲಿಕೆ  

ತನ್ನನ್ನು ತಾನೇ ಹೊಗಳಿಕೊಳ್ಳುವವನಲ್ಲ, ಕರ್ತ ಯೇಸು ಯಾರನ್ನು ಹೊಗಳುತ್ತಾರೋ ಅವನೇ ಯೋಗ್ಯನು.


ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ.


ತಮ್ಮನ್ನು ತಾವೇ ಹೊಗಳಿಕೊಳ್ಳುವವರೊಂದಿಗೆ ನಾವು ಹೋಲಿಸಿಕೊಳ್ಳಲು ಯತ್ನಿಸುವುದಿಲ್ಲ. ಏಕೆಂದರೆ, ಅವರು ತಮ್ಮತಮ್ಮೊಳಗೆ ತಮ್ಮನ್ನು ಅಳತೆ ಮಾಡಿಕೊಂಡು ಒಬ್ಬರೊಂದಿಗೊಬ್ಬರು ಹೋಲಿಸಿಕೊಳ್ಳುವುದರಿಂದ ವಿವೇಕವಿಲ್ಲದವರಾಗಿರುತ್ತಾರೆ.


ನೀವೇ ನನ್ನನ್ನು ಹೊಗಳಿಕೊಳ್ಳುವಂತೆ ಮಾಡಿ, ನಾನು ಬುದ್ಧಿಹೀನನಾಗಿ ನಡೆಯಲು ಒತ್ತಾಯಿಸಿದ್ದೀರಿ. ನನಗೆ ನಿಮ್ಮಿಂದಲೇ ಹೊಗಳಿಕೆಯು ಬೇಕಾಗಿತ್ತು. ಏಕೆಂದರೆ ನಾನು ಕೇವಲ ಅತ್ಯಲ್ಪನಾದರೂ “ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ” ಕಡಿಮೆ ಅಲ್ಲ.


ಕಲ್ಲು ಭಾರ, ಮರಳು ಭಾರ; ಆದರೆ ಇವೆರಡಕ್ಕಿಂತ ಮೂಢನ ಕೋಪವು ಬಹು ಭಾರ.


“ನೀನು ನನ್ನ ಸಂಗಡ ಬಂದು ಯೆಹೋವ ದೇವರಿಗೋಸ್ಕರ ನನಗುಂಟಾದ ಆಸಕ್ತಿಯನ್ನು ನೋಡು,” ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು