Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:5 - ಕನ್ನಡ ಸಮಕಾಲಿಕ ಅನುವಾದ

5 ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಾರ್ಯದಿಂದ ಹೊರಪಡದ ಪ್ರೀತಿಗಿಂತಲೂ, ಬಹಿರಂಗವಾದ ಗದರಿಕೆಯು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮರೆಯಾದ ಪ್ರೀತಿಗಿಂತ ಬಹಿರಂಗವಾದ ಗದರಿಕೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಕಾರ್ಯದಿಂದ] ಹೊರಪಡದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಹಿರಂಗವಾದ ಟೀಕೆ ಗುಟ್ಟಾದ ಪ್ರೀತಿಗಿಂತಲೂ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:5
5 ತಿಳಿವುಗಳ ಹೋಲಿಕೆ  

ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.


ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು.


ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.


“ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.


“ ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು