ಜ್ಞಾನೋಕ್ತಿಗಳು 28:12 - ಕನ್ನಡ ಸಮಕಾಲಿಕ ಅನುವಾದ12 ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವದು; ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಒಳ್ಳೆಯವರು ನಾಯಕರಾದಾಗ ಎಲ್ಲರಿಗೂ ಸಂತೋಷ. ಆದರೆ ಕೆಡುಕನು ಅಧಿಪತಿಯಾದಾಗ ಎಲ್ಲರೂ ಅಡಗಿಕೊಳ್ಳುವರು. ಅಧ್ಯಾಯವನ್ನು ನೋಡಿ |
ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.