Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:16 - ಕನ್ನಡ ಸಮಕಾಲಿಕ ಅನುವಾದ

16 ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು. ಆದರೆ ಲೋಭವನ್ನು ಹಗೆಮಾಡುವವನು ದೀರ್ಘಾಯುಷ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ವಿವೇಕಶೂನ್ಯನಾದ ಒಡೆಯ ಮಹಾಹಿಂಸಕ; ದುರ್ಲಾಭವನ್ನು ವಿರೋಧಿಸುವವನಿಗೆ ದೀರ್ಘಾಯುಷ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ವಿವೇಕಶೂನ್ಯನಾದ ಒಡೆಯನು ಮಹಾಹಿಂಸಕನು; ದೋಚಿಕೊಳ್ಳಲೊಲ್ಲದವನು ದೀರ್ಘಾಯುಷ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:16
11 ತಿಳಿವುಗಳ ಹೋಲಿಕೆ  

ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ.


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು. ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.


ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು. ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.


ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.


ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ!


ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ. ಲಂಚವನ್ನು ಹಗೆಮಾಡುವವನು ಬದುಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು