Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:23 - ಕನ್ನಡ ಸಮಕಾಲಿಕ ಅನುವಾದ

23 ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮುಖಸ್ತುತಿ ಮಾಡುವವನಿಗಿಂತ ಗದರಿಸುವವನೇ ಕೊನೆಗೆ ಹೆಚ್ಚು ದಯಾವಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮುಖಸ್ತುತಿ ಮಾಡುವವನಿಗಿಂತಲೂ ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಗದರಿಸುವವನು ಸ್ವಲ್ಪಕಾಲದ ನಂತರ ಮುಖಸ್ತುತಿ ಮಾಡುವವನಿಗಿಂತಲೂ ಹೆಚ್ಚಾಗಿ ಗೌರವಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:23
12 ತಿಳಿವುಗಳ ಹೋಲಿಕೆ  

“ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.


ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು.


ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು, ನೆರೆಯವನ ಕಾಲಿಗೆ ಬಲೆಯನ್ನು ಒಡ್ಡುತ್ತಾನೆ.


ಆಗ ಅರಸನಿಗೆ, “ಪ್ರವಾದಿಯಾದ ನಾತಾನನು,” ಎಂದರು. ಅವನು ಒಳಗೆ ಅರಸನ ಮುಂದೆ ಬಂದಾಗ, ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.


ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;


ಆದರೆ ತಪ್ಪುಮಾಡಿದವರನ್ನು ತಿದ್ದುವವರಿಗೆ ಶುಭವಾಗುವುದು; ಅವರ ಮೇಲೆ ಒಳ್ಳೆಯ ಆಶೀರ್ವಾದವು ಬರುವುದು.


ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು; ನಾನು ಯಾವ ಮನುಷ್ಯನನ್ನು ಹೊಗಳೆನು.


ಹೊಗಳುವುದರಲ್ಲಿ ನಾನು ಪ್ರವೀಣನಾಗಿದ್ದರೆ, ನನ್ನ ಸೃಷ್ಟಿಕರ್ತ ಆಗಿರುವವರು ನನ್ನನ್ನು ಬೇಗ ತೆಗೆದುಕೊಂಡು ಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು