Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:13 - ಕನ್ನಡ ಸಮಕಾಲಿಕ ಅನುವಾದ

13 ಬಡವರಿಗೂ ದಬ್ಬಾಳಿಕೆ ನಡೆಸುವವರಿಗೂ ಒಂದು ಸಂಗತಿ ಹುದುವಾಗಿರುವುದು: ಯೆಹೋವ ದೇವರು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವರು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಲಿತನೂ, ದಬ್ಬಾಳಿಕೆ ನಡೆಸುವವನೂ ಸ್ಥಿತಿಯಲ್ಲಿ ಎದುರುಬದುರು; ಆದರೆ ಸರ್ವೇಶ್ವರನೆ ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತಗ್ಗುವವನು ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ; ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಒಂದು ರೀತಿಯಲ್ಲಿ ಬಡವನಿಗೂ ಅವನನ್ನು ಕುಗ್ಗಿಸುವವನಿಗೂ ವ್ಯತ್ಯಾಸವಿಲ್ಲ; ಅವರಿಬ್ಬರಿಗೂ ಜೀವಕೊಟ್ಟಾತನು ಯೆಹೋವನೇ; ಅವರಿಬ್ಬರನ್ನು ಸೃಷ್ಟಿಮಾಡಿದವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:13
10 ತಿಳಿವುಗಳ ಹೋಲಿಕೆ  

ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.


ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.


ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.


ನೀವು ನಿಮ್ಮ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಹಿಂದೊಮ್ಮೆ ಸತ್ತವರಾಗಿದ್ದೀರಿ.


ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


“ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು