Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:17 - ಕನ್ನಡ ಸಮಕಾಲಿಕ ಅನುವಾದ

17 ನಿನ್ನ ಮಕ್ಕಳನ್ನು ಶಿಕ್ಷಿಸಿದರೆ, ಅವರು ನಿನಗೆ ಮನಶಾಂತಿಯನ್ನು ಕೊಡುವರು; ಹೌದು, ಅವರು ನೀನು ಬಯಸುವ ಹರ್ಷವನ್ನು ನಿನಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು, ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ಮಗನನ್ನು ದಂಡಿಸಿ ಸರಿಪಡಿಸು; ಅವನು ನಿನ್ನನ್ನು ಸಂತೋಷಪಡಿಸುವನು, ಮನೋಲ್ಲಾಸಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮಗನನ್ನು ಶಿಕ್ಷಿಸು; ನಿನ್ನನ್ನು ಸುಧಾರಿಸುವನು; ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಮಗನನ್ನು ತಿದ್ದಿ ಸರಿಪಡಿಸು; ಆಗ ನೀನು ಅವನ ಬಗ್ಗೆ ಹೆಮ್ಮೆಯಿಂದಿರುವೆ. ಅವನು ನಿನ್ನನ್ನು ತೃಪ್ತಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:17
6 ತಿಳಿವುಗಳ ಹೋಲಿಕೆ  

ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಆದರೆ ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.


ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.


ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ.


ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ; ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು.


ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಮರಣಕ್ಕೆ ನೀನು ಕಾರಣನಾಗಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು