Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:15 - ಕನ್ನಡ ಸಮಕಾಲಿಕ ಅನುವಾದ

15 ಜ್ಞಾನವು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯ; ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮಾಣಿಕ್ಯಕ್ಕಿಂತ ಜ್ಞಾನದ ಬೆಲೆ ಅಮೂಲ್ಯ. ನಿನಗಿಷ್ಟವಾದುದಾವುದೂ ಅದಕ್ಕೆ ಸಾಟಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜ್ಞಾನವು ರತ್ನಕ್ಕಿಂತಲೂ ಅಮೂಲ್ಯವಾದದ್ದು. ನಿನ್ನ ಇಷ್ಟ ವಸ್ತುಗಳಲ್ಲಿ ಯಾವುದೂ ಅದಕ್ಕೆ ಸಮವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:15
10 ತಿಳಿವುಗಳ ಹೋಲಿಕೆ  

ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು.


ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!


ನಮಗೆ ಮುಂದೆ ಪ್ರಕಟವಾಗಲಿರುವ ಮಹಿಮೆಯೊಂದಿಗೆ ಹೋಲಿಸುವಾಗ ಈಗಿನ ಸಂಕಟಗಳು ಅಲ್ಪವೆಂದು ನಾನು ಎಣಿಸುತ್ತೇನೆ.


ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.


ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ.


ನಿಮ್ಮ ಪ್ರೀತಿಯು ಜೀವಕ್ಕಿಂತ ಶ್ರೇಷ್ಠವಾದದ್ದು. ನನ್ನ ತುಟಿ ನಿಮ್ಮನ್ನು ಮಹಿಮೆಪಡಿಸುವುದು.


ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ.


ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು; ಅದರಿಂದ ಜೀವಂತರೆಲ್ಲರಿಗೂ ಲಾಭಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು