Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:16 - ಕನ್ನಡ ಸಮಕಾಲಿಕ ಅನುವಾದ

16 ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ; ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೀರ್ಘಾಯುಷ್ಯ, ಜ್ಞಾನವೆಂಬ ಆಕೆಯ ಬಲಗೈಯಲ್ಲಿದೆ; ಘನತೆ, ಶ್ರೀಮಂತಿಕೆಯೂ ಆಕೆಯ ಎಡಗೈಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ ಘನತೆಯೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜ್ಞಾನವೆಂಬಾಕೆಯ ಬಲಗೈಯಿಂದ ದೀರ್ಘಾಯುಷ್ಯವೂ ಎಡಗೈಯಿಂದ ಐಶ್ವರ್ಯವೂ ಘನತೆಯೂ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:16
14 ತಿಳಿವುಗಳ ಹೋಲಿಕೆ  

ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು, ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.


ದುಃಖ ಪಡುವವರಾಗಿದ್ದರೂ ಹರ್ಷಿಸುತ್ತಿದ್ದೆವು, ಬಡವರಾಗಿದ್ದಾಗಲೂ ಅನೇಕರನ್ನು ಐಶ್ವರ್ಯವಂತರನ್ನಾಗಿ ಮಾಡಿದೆವು, ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಾಗಿದ್ದೇವೆ.


ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ, ಐಶ್ವರ್ಯವೂ ಮಾನವೂ ಜೀವವೂ ಆಗಿದೆ.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ನೀನು ಕೇಳದ ಐಶ್ವರ್ಯವನ್ನೂ, ಘನವನ್ನೂ ಕೊಟ್ಟಿದ್ದೇನೆ. ಆದ್ದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸುಗಳಲ್ಲಿ ಒಬ್ಬನೂ ಇರುವುದಿಲ್ಲ.


ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು.


ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ.


ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡಿರಿ. ನನ್ನ ಶಕ್ತಿಯು ಕುಂದುತ್ತಿರುವಾಗ ನನ್ನನ್ನು ಕೈಬಿಡಬೇಡಿರಿ.


ಧನವೂ, ಐಶ್ವರ್ಯವೂ ಅವರ ಮನೆಯಲ್ಲಿ ಇರುವುದು; ಅವರ ನೀತಿಯು ಶಾಶ್ವತವಾಗಿ ಉಳಿಯುವುದು.


ಏಕೆಂದರೆ ಜ್ಞಾನದ ಮೂಲಕ ನಿನ್ನ ಜೀವನದ ದಿನಗಳು ಹೆಚ್ಚುವುವು; ನಿನ್ನ ಜೀವನದ ವರ್ಷಗಳು ವೃದ್ಧಿಯಾಗುವುವು.


ಅದು ನಿನ್ನ ಧಾನ್ಯ ತೆನೆಗಳನ್ನು ಮನೆಗೆ ತರುವುದೆಂದು ನಂಬುವೆಯಾ? ನಿನ್ನ ಕಣದಲ್ಲಿ ಕಾಳು ಕೂಡಿಸುವದೆಂದೂ ಅದನ್ನು ನಿರೀಕ್ಷಿಸುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು