Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:28 - ಕನ್ನಡ ಸಮಕಾಲಿಕ ಅನುವಾದ

28 ಕೊಡತಕ್ಕದ್ದು ಈಗಾಗಲೇ ನಿನ್ನಲ್ಲಿರುವಾಗ, “ಹೋಗಿ ಬಾ, ನಾಳೆ ನಿನಗೆ ಕೊಡುತ್ತೇನೆ,” ಎಂದು ನಿನ್ನ ನೆರೆಯವನಿಗೆ ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೆರೆಯವನಿಗೆ ನೀಡಲು ಇದೀಗಲೇ ನಿನ್ನಲ್ಲಿರುವಾಗ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎನ್ನಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ - ಹೋಗಿ ಬಾ, ನಾಳೆ ಕೊಡುತ್ತೇನೆ ಎಂದು ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಿನ್ನ ನೆರೆಯವನಿಗೆ ಕೊಡತಕ್ಕದ್ದು ನಿನ್ನಲ್ಲಿರುವಾಗ, “ನಾಳೆ ಬಾ, ಕೊಡುತ್ತೇನೆ” ಎಂದು ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:28
9 ತಿಳಿವುಗಳ ಹೋಲಿಕೆ  

“ ‘ನಿಮ್ಮ ನೆರೆಯವನನ್ನು ವಂಚಿಸಬಾರದು. “ ‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.


ಆದ್ದರಿಂದ ನೀವು ಎಷ್ಟು ಆಸಕ್ತರಾಗಿ ಪ್ರಾರಂಭಿಸಿದ್ದೀರೋ, ಅಷ್ಟೇ ಆಸಕ್ತಿಯಿಂದ ಅದನ್ನು ಮುಗಿಸಿರಿ. ನಿಮ್ಮ ನಿಮ್ಮ ಶಕ್ತ್ಯಾನುಸಾರವಾಗಿ ಈ ಯೋಜನೆಯನ್ನು ಪೂರ್ಣಗೊಳಿಸಿರಿ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಅಂಥವರು ಒಳ್ಳೆಯದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲು ಕೊಡುವುದರಲ್ಲಿ ಸಿದ್ಧರಾಗಿರುವವರೂ ಪರೋಪಕಾರ ಮಾಡುವವರೂ ಆಗಿರಬೇಕೆಂದು ಅವರನ್ನು ಪ್ರಬೋಧಿಸು.


ಆದರೂ ಈ ವಿಷಯದಲ್ಲಿ ನಿಮ್ಮ ಬಗ್ಗೆ ನಮಗಿರುವ ಹೊಗಳಿಕೆಯು ಸುಳ್ಳಾಗಿರಬಾರದೆಂದು ಸಹೋದರರನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ನೀವು ಸಹ ನಾನು ನಿಮಗೆ ಹೇಳಿದಂತೆ, ಇದಕ್ಕಾಗಿ ಸಿದ್ಧರಾಗಿರುವಿರಿ ಎಂದು ಭಾವಿಸುತ್ತೇನೆ.


ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ.


ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಏಕೆಂದರೆ ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.


ನಾನು ನನ್ನ ಅಂಗಿಯನ್ನು ತೆಗೆದು ಹಾಕಿರಲು, ಅದನ್ನು ಮತ್ತೆ ಹಾಕಿಕೊಳ್ಳುವುದು ಹೇಗೆ? ನಾನು ನನ್ನ ಕಾಲುಗಳನ್ನು ತೊಳೆದುಕೊಂಡಿರಲು, ನಾನು ಮತ್ತೆ ಅವುಗಳನ್ನು ಕೊಳೆ ಮಾಡುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು