Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:16 - ಕನ್ನಡ ಸಮಕಾಲಿಕ ಅನುವಾದ

16 ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ಎಂದೂ ತೃಪ್ತಿ ಹೊಂದದ ಭೂಮಿ, ‘ಸಾಕು!’ ಎಂದು ಹೇಳದಿರುವ ಬೆಂಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವು ಯಾವುದೆಂದರೆ: ಪಾತಾಳ, ಹೆರದ ಗರ್ಭ, ನೀರಿಗಾಗಿ ಹಾತೊರೆಯುವ ಭೂಮಿ, ‘ಸಾಕಾಯಿತು’ ಎನ್ನದ ಬೆಂಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾವವಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂವಿು, ಸಾಕಾಯಿತೆಂದು ಹೇಳದ ಬೆಂಕಿ, ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮರಣದ ಸ್ಥಳ, ಮಕ್ಕಳಿಲ್ಲದ ಹೆಂಗಸು, ಸತತವಾಗಿ ನೀರಿನ ಅಗತ್ಯವಿರುವ ಭೂಮಿ ಮತ್ತು ಆರದ ಬೆಂಕಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:16
5 ತಿಳಿವುಗಳ ಹೋಲಿಕೆ  

ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ.


ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ.


ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರಲಿಲ್ಲ ಎಂದು ತಿಳಿದಾಗ, ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೆಕಿಚ್ಚು ಪಟ್ಟು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ,” ಎಂದಳು.


“ಜಿಗಣೆಗೆ, ‘ಕೊಡು! ಕೊಡು!’ ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳುಂಟು. “ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ, ಹೌದು, ‘ಸಾಕು!’ ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ:


ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು