Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:30 - ಕನ್ನಡ ಸಮಕಾಲಿಕ ಅನುವಾದ

30 ಮೃಗಗಳಲ್ಲಿ ಬಲಿಷ್ಠವಾಗಿರುವ ಸಿಂಹವು, ಯಾವುದಕ್ಕೂ ಹಿಮ್ಮೆಟ್ಟದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಾವುದಕ್ಕೂ ಹೆದರಿ ಓರೆಯಾಗದ ಮೃಗರಾಜನಾದ ಸಿಂಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾವದಕ್ಕೂ ಹೆದರಿ ಓರೆಯಾಗದ ಮೃಗರಾಜನಾದ ಸಿಂಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸಿಂಹವು ಎಲ್ಲಾ ಪ್ರಾಣಿಗಳಲ್ಲಿ ಅತಿ ಬಲಿಷ್ಠವಾದದ್ದು; ಅದು ಯಾವುದಕ್ಕೂ ಭಯಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:30
7 ತಿಳಿವುಗಳ ಹೋಲಿಕೆ  

ಏಳನೆಯ ದಿವಸದಲ್ಲಿ ಸೂರ್ಯ ಮುಳುಗುವುದಕ್ಕಿಂತ ಮುಂಚೆ ಆ ಊರಿನವರು ಅವನಿಗೆ, “ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲಿಷ್ಠವಾದದ್ದೇನು?” ಎಂದು ಹೇಳಿದರು. ಅವನು ಉತ್ತರವಾಗಿ ಅವರಿಗೆ, “ನೀವು ನನ್ನ ಕಡಸಿನಿಂದ ಉಳದೆ ಇದ್ದರೆ, ನನ್ನ ಒಗಟನ್ನು ಗ್ರಹಿಸಲಾರಿರಿ.”


ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು. ಸಿಂಹದ ಮರಿಯ ಹಾಗೆ ಎದ್ದೇಳುವುದು. ಅದು ಬೇಟೆಯನ್ನು ತಿಂದು, ಹತರಾದವರ ರಕ್ತವನ್ನು ಕುಡಿಯುವವರೆಗೆ ಮಲಗದು.”


ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ, ಸಂತೋಷಕರವಾಗಿಯೂ ಇದ್ದರು. ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ, ಸಿಂಹಗಳಿಗಿಂತ ಬಲವುಳ್ಳವರೂ ಆಗಿದ್ದರು.


“ಗಂಭೀರ ಗಮನದ ಮೂರು ಪ್ರಾಣಿಗಳಿವೆ, ಹೌದು, ಗಂಭೀರ ಗತಿಯ ನಾಲ್ಕಿವೆ:


ಕತ್ತೆತ್ತಿ ನಡೆಯುವ ಹುಂಜ, ಹೋತವು, ತನ್ನ ಸುತ್ತಲೂ ಸೈನಿಕರಿರುವ ಅರಸನು.


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು