Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:4 - ಕನ್ನಡ ಸಮಕಾಲಿಕ ಅನುವಾದ

4 ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? ಅವರ ಹೆಸರೇನು? ಅವರ ಮಗನ ಹೆಸರೇನು? ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಟಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂವಿುಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:4
31 ತಿಳಿವುಗಳ ಹೋಲಿಕೆ  

ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.


ತಮ್ಮ ಮೇಘಗಳಲ್ಲಿ ನೀರನ್ನು ತುಂಬಿ ಕಟ್ಟುತ್ತಾರೆ; ಆದರೂ ಮೋಡವು ಅದರ ಭಾರದಿಂದ ಒಡೆದುಹೋಗುವುದಿಲ್ಲ.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಆಕಾಶಕ್ಕೆ ಏರಿಹೋಗಿ, ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಆಕಾಶದಲ್ಲಿ ಇರುವಂಥದ್ದೂ ಅಲ್ಲ.


ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.


ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “ ‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’


ನಿಮ್ಮ ದೇವರಾದ ಯೆಹೋವ ದೇವರೆಂಬ ಈ ಘನವುಳ್ಳ ಹೆಸರಿಗೆ ನೀವು ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನಿಯಮದ ಮಾತುಗಳನ್ನು ಅಲಕ್ಷಿಸಿ, ತಪ್ಪು ದಾರಿ ಹಿಡಿದರೆ,


ಆತನನ್ನು ದಬ್ಬಾಳಿಕೆಯಿಂದಲೂ, ನ್ಯಾಯತೀರ್ಪಿನಿಂದಲೂ ಎಳೆದುಕೊಂಡು ಹೋದರು. ಆತನ ಕಾಲದವರಲ್ಲಿ ಯಾರು ಮರುಗಿದರು? ಏಕೆಂದರೆ ಆತನನ್ನು ಜೀವಿತರ ಲೋಕದಿಂದ ತೆಗೆದುಹಾಕಿದರು. ನನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಶಿಕ್ಷೆಯನ್ನು ಹೊಂದಿದನು.


ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ.


ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.


ನಾನೇ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಸರ್ವಶಕ್ತ ದೇವರೆಂದು ಪ್ರಕಟಿಸಿಗೊಂಡೆನು. ಆದರೆ ಯೆಹೋವ ದೇವರೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಪೂರ್ಣವಾಗಿ ತಿಳಿಸಲಿಲ್ಲ.


ಆದರೆ ಯೆಹೋವ ದೇವರ ದೂತನು ಅವನಿಗೆ, “ನನ್ನ ಹೆಸರು ಏನೆಂದು ನೀನು ಕೇಳುವುದೇನು? ಆ ಹೆಸರು ಆಶ್ಚರ್ಯಕರವಾದದ್ದು,” ಎಂದನು.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಏಕೆಂದರೆ ಅವರು ಸಮುದ್ರಗಳ ಮೇಲೆ ಅದನ್ನು ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರಪಡಿಸಿದ್ದಾರೆ.


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.


ನೀವು ನಿಮ್ಮ ಶ್ವಾಸ ಊದಿದಾಗ ಸಮುದ್ರವು ಅವರನ್ನು ನುಂಗಿಕೊಂಡಿತು. ಅವರು ಸೀಸದಂತೆ ಮಹಾಸಾಗರದಲ್ಲಿ ಮುಳುಗಿ ಹೋದರು.


ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ.


ಆಕಾಶಗಳನ್ನು ನಿರ್ಮಿಸಿದ ಯೆಹೋವ ದೇವರು ಇಂತೆನ್ನುತ್ತಾನೆ, “ದೇವರು ತಾನೇ ಭೂಮಿಯನ್ನು ನಿರ್ಮಿಸಿ, ಅದನ್ನು ಉಂಟುಮಾಡಿದನು. ಆತನೇ ಅದನ್ನು ಸ್ಥಾಪಿಸಿದನು. ಅದನ್ನು ವ್ಯರ್ಥವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದನು. ನಾನೇ ಯೆಹೋವ ದೇವರು, ನಾನಲ್ಲದೆ ಇನ್ನಾರೂ ಇಲ್ಲ.


“ನೀನು ದೇವರ ರಹಸ್ಯಗಳನ್ನು ಕಂಡುಕೊಳ್ಳುವಿಯಾ? ಸರ್ವಶಕ್ತರ ಮಿತಿಯನ್ನು ನಿನ್ನಿಂದ ಪರೀಕ್ಷಿಸಲಾದೀತೇ?


ಅದು ಆಕಾಶಕ್ಕಿಂತಲೂ ಎತ್ತರವಾಗಿದೆ; ಆಗ ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳವಾಗಿದೆ; ಆಗ ನೀನೇನು ತಿಳುಕೊಳ್ಳುವಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು