ಜ್ಞಾನೋಕ್ತಿಗಳು 30:8 - ಕನ್ನಡ ಸಮಕಾಲಿಕ ಅನುವಾದ8 ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ. ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ. ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನಿಂದ ಕಪಟವನ್ನೂ ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು. ಅಧ್ಯಾಯವನ್ನು ನೋಡಿ |