Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:13 - ಕನ್ನಡ ಸಮಕಾಲಿಕ ಅನುವಾದ

13 ಆಕೆಯು ಉಣ್ಣೆಯನ್ನೂ ಸೆಣಬನ್ನೂ ತಂದು, ತನ್ನ ಚಟುವಟಿಕೆಯ ಕೈಗಳಿಂದ ಕೆಲಸ ಮಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು, ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಉಣ್ಣೆಯನ್ನೂ ಸೆಣಬನ್ನೂ ಹುಡುಕಿ ತರುವಳು; ತನ್ನ ಕೈಗಳಿಂದಲೇ ಬಟ್ಟೆಯನ್ನು ನೇಯುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಉಣ್ಣೆಯನ್ನೂ ಸೆಣಬನ್ನೂ ಹುಡುಕಿ ತಂದು ಕೈಗೆಲಸವನ್ನೆಸಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವಳು ಬಟ್ಟೆ ತಯಾರಿಸಲು ಉಣ್ಣೆಯನ್ನು ಸೆಣಬಿನ ನಾರನ್ನು ಯಾವಾಗಲೂ ಶೇಖರಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:13
17 ತಿಳಿವುಗಳ ಹೋಲಿಕೆ  

ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವವರೆಗೆ ಹಕ್ಕಲಾದುಕೊಳ್ಳುವುದಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿಕೊಂಡು ಹೋಗುತ್ತಿದ್ದಳು.


ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.


ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ.


ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.


ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೆಯದನ್ನೇ ಮಾಡುವಳು.


ಆಕೆಯು ವರ್ತಕರ ಹಡಗುಗಳಂತೆ ಇರುವಳು; ದೂರದಿಂದ ಆಹಾರವನ್ನು ಆಕೆಯು ತರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು