ಜ್ಞಾನೋಕ್ತಿಗಳು 31:4 - ಕನ್ನಡ ಸಮಕಾಲಿಕ ಅನುವಾದ4 ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕುಡುಕತನ ರಾಜನಿಗೆ ತಕ್ಕುದ್ದಲ್ಲ; ಲೆಮೂವೇಲನೇ ಕೇಳು, ಅದು ರಾಜನಿಗೆ ಯೋಗ್ಯವಲ್ಲ; ಮದ್ಯಪಾನಾಸಕ್ತಿ ಅಧಿಕಾರಿಗಳಿಗೆ ಹಿತವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದ್ರಾಕ್ಷಾರಸವನ್ನು ಕುಡಿಯುವದು ರಾಜರಿಗೆ ಯೋಗ್ಯವಲ್ಲ; ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ; ಮದ್ಯವೆಲ್ಲಿ ಎನ್ನುವದು ಪ್ರಭುಗಳಿಗೆ ವಿಹಿತವಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಲೆಮೂವೇಲನೇ, ರಾಜರುಗಳು ಮದ್ಯವನ್ನು ಕುಡಿಯುವುದು ಒಳ್ಳೆಯದಲ್ಲ. ಮದ್ಯಪಾನ ಆಳುವವರಿಗೆ ಒಳ್ಳೆಯದಲ್ಲ. ಅಧ್ಯಾಯವನ್ನು ನೋಡಿ |
ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.