Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:3 - ಕನ್ನಡ ಸಮಕಾಲಿಕ ಅನುವಾದ

3 ನಾನೂ ಕೂಡ ನನ್ನ ತಂದೆಗೆ ನೆಚ್ಚಿನ ಮಗನೂ ನನ್ನ ತಾಯಿಗೆ ಮುದ್ದು ಮಗನೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನೂ ನನ್ನ ತಂದೆಗೆ ಅಧೀನನಾದ ಮಗನೂ, ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನೂ ಕೂಡ ತಂದೆಗೆ ಒಬ್ಬ ಚಿಕ್ಕ ಮಗುವಾಗಿದ್ದೆ, ತಾಯಿಗೆ ಏಕೈಕ ಕುಮಾರನೂ ಕೋಮಲನೂ ಆಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನೂ ನನ್ನ ತಂದೆಗೆ [ಅಧೀನನಾದ] ಮಗನೂ, ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನನ್ನ ತಂದೆಗೆ ಚಿಕ್ಕ ಮಗನಾಗಿದ್ದೆ. ನನ್ನ ತಾಯಿಗೆ ನಾನೊಬ್ಬನೇ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:3
8 ತಿಳಿವುಗಳ ಹೋಲಿಕೆ  

ದಾವೀದನು, “ನನ್ನ ಮಗ ಸೊಲೊಮೋನನು ಎಳೆಯ ಪ್ರಾಯದವನಾಗಿದ್ದಾನೆ. ಯೆಹೋವ ದೇವರಿಗೆ ಕಟ್ಟಬೇಕಾದ ಆಲಯವು ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ, ಸೌಂದರ್ಯದಲ್ಲಿಯೂ ಅಧಿಕ ಘನವುಳ್ಳದ್ದಾಗಿರಬೇಕು. ನಾನು ಅದಕ್ಕೋಸ್ಕರ ಈಗ ಸಿದ್ಧಮಾಡುವೆನು,” ಎಂದು ಹೇಳಿದನು. ಆದ್ದರಿಂದ ದಾವೀದನು ಸಾಯುವುದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.


ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.


ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನೆಂದರೆ, “ದೇವರು ಒಬ್ಬನನ್ನೇ ಆಯ್ದುಕೊಂಡ ನನ್ನ ಮಗ ಸೊಲೊಮೋನನು ಚಿಕ್ಕವನೂ ಎಳೆಯ ಪ್ರಾಯದವನೂ ಆಗಿದ್ದಾನೆ. ಆದರೆ ಕೆಲಸವು ದೊಡ್ಡದು. ಈ ಮಹಾ ಕಟ್ಟಡವು ಮನುಷ್ಯರಿಗೋಸ್ಕರವಲ್ಲ, ದೇವರಾದ ಯೆಹೋವ ದೇವರಿಗೋಸ್ಕರವೇ,


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.


ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ದಾವೀದನ ಹೆಂಡತಿ ಬತ್ಷೆಬೆಳು ಅಮ್ಮಿಯೇಲನ ಮಗಳು. ಆಕೆಗೆ ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡು ಮಕ್ಕಳು ಜನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು