ಜ್ಞಾನೋಕ್ತಿಗಳು 4:8 - ಕನ್ನಡ ಸಮಕಾಲಿಕ ಅನುವಾದ8 ಜ್ಞಾನವನ್ನು ನೀನು ಅಮೂಲ್ಯವೆಂದು ಎಣಿಸು, ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿಕೊ, ಆಕೆಯು ನಿನ್ನನ್ನು ಘನಪಡಿಸುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜ್ಞಾನವೆಂಬಾಕೆಯನ್ನು ಶ್ರೇಷ್ಠಳೆಂದು ಭಾವಿಸಿದೆಯಾದರೆ, ಆಕೆ ನಿನ್ನನ್ನು ಸನ್ಮಾನಿಸುವಳು. ನೀನು ಅವಳನ್ನು ಅಪ್ಪಿಕೊಂಡೆಯಾದರೆ, ಆಕೆ ನಿನ್ನನ್ನು ಘನಪಡಿಸುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು; ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜ್ಞಾನವನ್ನು ಪ್ರೀತಿಸು, ಆಗ ಅದು ನಿನ್ನನ್ನು ಉನ್ನತಸ್ಥಾನಕ್ಕೆ ತರುವುದು. ಜ್ಞಾನವನ್ನು ಅಪ್ಪಿಕೊ; ಆಗ ಅದು ನಿನಗೆ ಸನ್ಮಾನವನ್ನು ತರುವುದು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.