ಜ್ಞಾನೋಕ್ತಿಗಳು 6:22 - ಕನ್ನಡ ಸಮಕಾಲಿಕ ಅನುವಾದ22 ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ. ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಡೆಯುವಾಗ ಅವು ನಿನಗೆ ಮುಂದಾಳಾಗಿರುವುವು, ಮಲಗುವಾಗ ಅವು ನಿನ್ನನ್ನು ಕಾಯುವುವು, ಎಚ್ಚರಗೊಂಡಾಗ ಅವು ನಿನ್ನೊಡನೆ ಸಂವಾದಿಸುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ನಡಿಸುವದು, ಮಲಗಿಕೊಂಡಾಗ ಕಾಯುವದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀನು ಹೋಗುವಲ್ಲೆಲ್ಲಾ ಅವರ ಉಪದೇಶಗಳು ನಿನ್ನನ್ನು ನಡೆಸುತ್ತವೆ. ನೀನು ಮಲಗಿರುವಾಗಲೂ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಡನೆ ಮಾತಾಡಿ ನಿನಗೆ ಮಾರ್ಗದರ್ಶನ ನೀಡುತ್ತವೆ. ಅಧ್ಯಾಯವನ್ನು ನೋಡಿ |