ಜ್ಞಾನೋಕ್ತಿಗಳು 6:25 - ಕನ್ನಡ ಸಮಕಾಲಿಕ ಅನುವಾದ25 ನಿನ್ನ ಹೃದಯ ಅವಳ ಸೌಂದರ್ಯವನ್ನು ಮೋಹಿಸದಿರಲಿ. ಅವಳ ಕಣ್ಣುರೆಪ್ಪೆಗಳಿಂದ ಅವಳು ನಿನ್ನನ್ನು ವಶಮಾಡಿಕೊಳ್ಳದೆ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಿನ್ನ ಹೃದಯ ಅವಳ ಬೆಡಗನ್ನು ಮೋಹಿಸದಿರಲಿ; ಕಣ್ಣು ಮಿಟುಕಿಸಿ ಅವಳು ನಿನ್ನನ್ನು ವಶಮಾಡಿಕೊಳ್ಳದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಿನ್ನ ಹೃದಯವು ಅವಳ ಬೆಡಗನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣು ರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಕೆಯ ಸೌಂದರ್ಯವನ್ನು ಕಂಡು ಹೃದಯದಲ್ಲಿ ಆಸೆಪಡಬೇಡ. ಆಕೆಯ ಕಣ್ಣುಗಳು ನಿನ್ನನ್ನು ವಶಮಾಡಿಕೊಳ್ಳಲು ಬಿಡಬೇಡ. ಅಧ್ಯಾಯವನ್ನು ನೋಡಿ |
ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.