Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:26 - ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ ವೇಶ್ಯೆಯನ್ನು ಊಟದಿಂದ ಕೊಂಡುಕೊಳ್ಳಬಹುದು, ಆದರೆ ವ್ಯಭಿಚಾರಿಣಿ ಅಮೂಲ್ಯ ಜೀವವನ್ನೇ ಬೇಟೆಯಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ವೇಶ್ಯೆಯನ್ನು ಕೊಂಡುಕೊಳ್ಳಬಹುದು ತುಂಡುರೊಟ್ಟಿಗೆ, ವ್ಯಭಿಚಾರಿಣಿಯೇ ಬೇಟೆಮಾಡುವಳು ನಿನ್ನ ಸಿರಿಪ್ರಾಣಕ್ಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೂಳೆಯು ಒಂದು ರೊಟ್ಟಿಗೇ ಬರಬಹುದು; ಆದರೆ ಬೇರೊಬ್ಬನ ಹೆಂಡತಿಗೆ ನಿನ್ನ ಜೀವವನ್ನೇ ಕಳೆದುಕೊಳ್ಳಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:26
14 ತಿಳಿವುಗಳ ಹೋಲಿಕೆ  

ಆದರೆ ನಿನ್ನ ಆಸ್ತಿಯನ್ನು ವೇಶ್ಯೆಯರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ, ವಿಶೇಷ ಔತಣವನ್ನೇ ಮಾಡಿಸಿದ್ದೀಯಲ್ಲಾ!’ ಎಂದನು.


ಜ್ಞಾನಪ್ರಿಯನು ತಂದೆಗೆ ಆನಂದ ಆದರೆ ವೇಶ್ಯೆಯರ ಸಹವಾಸದಿಂದ ಆಸ್ತಿಯ ವಿನಾಶ.


ಆಗ ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡಬಿದ್ದು, ಒಂದು ಬೆಳ್ಳಿಯ ಹಣವನ್ನೂ, ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ, “ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆಯಲ್ಲಿ ಸೇರಿಸಿಕೋ, ಎಂದು ಹೇಳುವರು,” ಎಂದರು.’ ”


ಹೀಗೆ ಹೇಳು ಎಂದು, ‘ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡುಗಳನ್ನು ಹೊಲೆದು ಮತ್ತು ಪ್ರತಿಯೊಬ್ಬನ ಎತ್ತರದ ತಲೆಗಳಿಗೆ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಪುತ್ರಿಯರಿಗೆ ಕಷ್ಟ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಸುಳ್ಳಾಗಿ ಮಾತನಾಡಿದ್ದರಿಂದಲೂ, ಸುಳ್ಳನ್ನು ದರ್ಶಿಸಿದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನು. ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಪರಿಹಾಸ್ಯಗಾರರು ಪಟ್ಟಣದಲ್ಲಿ ಗಲಾಟೆ ಎಬ್ಬಿಸುತ್ತಾರೆ. ಆದರೆ ಜ್ಞಾನಿಗಳು ಕೋಪವನ್ನು ಆರಿಸುವರು.


ಅವನು ತನ್ನ ಪ್ರಾಣವು ಅಪಾಯದಲ್ಲಿರುವುದನ್ನು ತಿಳಿಯದೆ, ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವವರೆಗೆ, ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.


ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆ ಎಚ್ಚರಿಕೆ, ನಿನ್ನ ಪ್ರಯಾಸದ ಫಲವು ಪರರ ಮನೆ ಸೇರದಂತೆ ನೋಡಿಕೋ.


ತನ್ನ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನಮ್ಮನ್ನು ಅವಮಾನ ಮಾಡುವುದಕ್ಕೆ ಈ ಹಿಬ್ರಿಯನು ನಮ್ಮಲ್ಲಿಗೆ ಬಂದಿದ್ದಾನೆ. ಅವನು ನನ್ನ ಮೇಲೆ ಅತ್ಯಾಚಾರಮಾಡುವುದಕ್ಕೆ ನನ್ನ ಹತ್ತಿರ ಬಂದನು. ಆಗ ನಾನು ಗಟ್ಟಿಯಾಗಿ ಕೂಗಿದೆನು.


ನೀನು ನಿನ್ನ ಗೌರವವನ್ನು ಬೇರೆಯವರಿಗೆ ಕಳೆಯಬೇಡ, ನಿನ್ನ ಘನತೆನ್ನು ಕ್ರೂರನಿಗೂ ಕೊಡಬೇಡ.


ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ, ಅವನ ವಸ್ತ್ರಗಳು ಸುಡುವುದಿಲ್ಲವೋ?


ಕಳ್ಳನಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.


ಸ್ವಲ್ಪ ಸಮಯದ ನಂತರ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣು ಹಾಕಿ, “ನನ್ನ ಸಂಗಡ ಮಲಗು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು