Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:29 - ಕನ್ನಡ ಸಮಕಾಲಿಕ ಅನುವಾದ

29 ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಂತೆಯೆ ನೆರೆಯವನ ಸತಿಯನ್ನು ಕೂಡುವವನ ಗತಿಯು; ಆಕೆಯನ್ನು ಮುಟ್ಟುವವನು ತಪ್ಪಿಸಿಕೊಳ್ಳನು ದಂಡನೆಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವದು, ಯಾವನು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬೇರೊಬ್ಬನ ಹೆಂಡತಿಯೊಡನೆ ಮಲಗಿಕೊಳ್ಳುವವನಿಗೆ ಇದೇ ರೀತಿಯಾಗುವುದು. ಅವನು ದಂಡನೆ ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:29
19 ತಿಳಿವುಗಳ ಹೋಲಿಕೆ  

ನೀವು ಬರೆದ ಸಂಗತಿಗಳನ್ನು ಕುರಿತಾಗಿ ಹೇಳುವುದೇನೆಂದರೆ, “ಸ್ತ್ರೀಸಂಪರ್ಕವಿಲ್ಲದೆ ಇರುವುದು ಮನುಷ್ಯನಿಗೆ ಒಳ್ಳೆಯದು.”


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ಅಸಹ್ಯಕರವಾದದ್ದನ್ನು ಮಾಡಿದ್ದಾನೆ; ಮತ್ತೊಬ್ಬನು ಅತ್ಯಾಚಾರದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಮಾನಭಂಗಪಡಿಸಿದ್ದಾನೆ.


ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.


ಅಹೀತೋಫೆಲನು ಅಬ್ಷಾಲೋಮನಿಗೆ, “ಮನೆಗೆ ಕಾವಲಿಟ್ಟ ನಿನ್ನ ತಂದೆಯ ಉಪಪತ್ನಿಯರ ಸಂಗಡ ಮಲಗು; ಆಗ ನಿನ್ನ ತಂದೆ ನಿನ್ನನ್ನು ತನ್ನ ಶತ್ರುವನ್ನಾಗಿ ಮಾಡಿದನೆಂದು ಎಲ್ಲ ಇಸ್ರಾಯೇಲರಿಗೆ ತಿಳಿಯುವುದು. ಆಗ ನಿನ್ನ ಜನರ ಕೈಗಳೂ ಬಲವಾಗುವುವು,” ಎಂದನು.


“ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.


ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”


“ ‘ಪರರ ಹೆಂಡತಿಯೊಂದಿಗೆ ನೀನು ಸಂಗಮಿಸಿ ಅಶುದ್ಧನಾಗಬೇಡ.


ಒಬ್ಬನು ಧಗಧಗಿಸುವ ಕೆಂಡದ ಮೇಲೆ ನಡೆದರೆ, ಅವನ ಪಾದಗಳು ಸುಡುವುದಿಲ್ಲವೋ?


ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾಗಿರುವ ಸ್ತ್ರೀಯನ್ನು ಸಮೀಪಿಸದೆ,


ನೀವು ನಿಮ್ಮ ಖಡ್ಗದ ಮೇಲೆ ಭರವಸೆ ಇಟ್ಟು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ನಿಮ್ಮ ನೆರೆಯವನ ಹೆಂಡತಿಯನ್ನು ಕೆಡಿಸುವಿರಿ. ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡಿರೇನು?’


ಗೆರಾರಿನಲ್ಲಿ ಅಬ್ರಹಾಮನು ತನ್ನ ಹೆಂಡತಿ ಸಾರಳ ವಿಷಯವಾಗಿ, “ಅವಳು ನನ್ನ ತಂಗಿ,” ಎಂದು ಹೇಳಿದ್ದನು. ಆದ್ದರಿಂದ ಗೆರಾರಿನ ಅರಸ ಅಬೀಮೆಲೆಕನು ಸಾರಳನ್ನು ಕರೆಯಿಸಿ ತನ್ನ ಅರಮನೆಗೆ ತೆಗೆದುಕೊಂಡನು.


ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು