Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:5 - ಕನ್ನಡ ಸಮಕಾಲಿಕ ಅನುವಾದ

5 ಬೇಟೆಗಾರನ ಕೈಯಿಂದ ಜಿಂಕೆಯೂ, ಬಲೆ ಬೀಸುವವನ ಕೈಯಿಂದ ಪಕ್ಷಿಯೂ ತಪ್ಪಿಸಿಕೊಳ್ಳುವಂತೆ ನೀನು ತಪ್ಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬೇಡನಿಂದ ಓಡುವ ಜಿಂಕೆಯಂತೆ, ಬೇಟೆಗಾರನ ಕೈಯಿಂದ ಹಾರಿಹೋಗುವ ಹಕ್ಕಿಯಂತೆ, ಆ ಬಲೆಯಿಂದ ತಪ್ಪಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ ಪಕ್ಷಿಯು ಹಾರಿಹೋಗುವ ಹಾಗೂ ತಪ್ಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆ ಆ ಸಾಲದ ಬಂಧನದಿಂದ ತಪ್ಪಿಸಿಕೊ. ಬಲೆಯಿಂದ ತಪ್ಪಿಸಿಕೊಂಡು ಹಾರುವ ಪಕ್ಷಿಯಂತೆ ನಿನ್ನನ್ನು ಬಿಡುಗಡೆ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:5
6 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿ ದೇವರು ನಿಮ್ಮನ್ನು ಬೇಡನ ಉರುಲಿನಿಂದ ರಕ್ಷಿಸುವರು. ಮರಣಾಂತಿಕವಾದ ಸಾಂಕ್ರಾಮಿಕ ರೋಗದಿಂದಲೂ ಬಿಡಿಸುವರು.


ನಾವು ಬೇಟೆಗಾರರ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತೆ ಇದ್ದೇವೆ. ನಾವು ಹರಿದುಹೋದ ಬಲೆಯಿಂದ ತಪ್ಪಿಸಿಕೊಂಡೆವು.


ಪಕ್ಷಿಗಳ ಕಣ್ಣೆದುರಿಗೆ ಕಾಣುವಂತೆ ಬಲೆಯನ್ನು ಹರಡುವುದು ವ್ಯರ್ಥವಲ್ಲವೇ!


ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” ಎಂದು ನೀವು ನನಗೆ ಹೇಗೆ ಹೇಳುವಿರಿ?


ಯೆರೂಸಲೇಮಿನ ಪುತ್ರಿಯರೇ, ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ. ಎಚ್ಚರಿಸಲೂ ಬೇಡಿರಿ ಎಂದು ಅಡವಿಯ ಹುಲ್ಲೆ ಹರಿಣಿಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ನನ್ನ ಪ್ರಿಯನು ಜಿಂಕೆಯ ಹಾಗೆ ಇದ್ದಾನೆ. ದುಪ್ಪಿಯ ಮರಿಯ ಹಾಗೆಯೂ ಇದ್ದಾನೆ. ಇಗೋ! ಅವನು ನಮ್ಮ ಗೋಡೆಯ ಹಿಂದೆ ನಿಂತಿದ್ದಾನೆ. ಜಾಲಾಂತರಗಳಲ್ಲಿ ತನ್ನನ್ನು ತೋರಿಸಿ, ಕಿಟಿಕಿಗಳಿಂದ ನೋಡುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು