Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:9 - ಕನ್ನಡ ಸಮಕಾಲಿಕ ಅನುವಾದ

9 ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆ ಮಾಡುವುದು? ನಿನ್ನ ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೋಮಾರಿಯೇ, ಎಷ್ಟು ಹೊತ್ತು ನಿದ್ರಿಸುವೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೋಮಾರಿಯೇ, ಇನ್ನೆಷ್ಟುಕಾಲ ಮಲಗಿಕೊಂಡಿರುವೆ? ನಿನ್ನ ವಿಶ್ರಾಂತಿಯಿಂದ ಯಾವಾಗ ಎದ್ದೇಳುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:9
15 ತಿಳಿವುಗಳ ಹೋಲಿಕೆ  

ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ಜನರಲ್ಲಿ ಬುದ್ಧಿಹೀನರೇ, ನೀವು ಗ್ರಹಿಸಿರಿ. ಮೂರ್ಖರೇ, ಯಾವಾಗ ಬುದ್ಧಿವಂತರಾಗುವಿರಿ?


ಈಗಿನ ಕಾಲವನ್ನು ತಿಳಿದು ಇದನ್ನೆಲ್ಲಾ ಮಾಡಿರಿ. ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಗಳಿಗೆಯಾಗಿದೆ. ಏಕೆಂದರೆ, ನಮ್ಮ ರಕ್ಷಣೆಯು ನಾವು ಮೊದಲು ವಿಶ್ವಾಸವಿಟ್ಟಿದಕ್ಕಿಂತ ಈಗ ಹತ್ತಿರವಾಗಿರುತ್ತದೆ.


“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ದೇವರು ಕಳುಹಿಸಿದ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಹಾನನು.


ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವಂತನಾಗು.


ಬೇಸಿಗೆಯಲ್ಲಿ ಅದು ತನ್ನ ಆಹಾರವನ್ನು ಸಂಗ್ರಹಿಸುತ್ತದೆ. ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿಕೊಳ್ಳುತ್ತದೆ.


ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ?


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.


ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!


ಬಾಗಿಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ, ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುತ್ತಾನೆ.


ಸುಮ್ಮನೇ ಕೈಕಟ್ಟಿ ಕುಳಿತುಕೊಂಡು ಬುದ್ಧಿಹೀನರು, ತಮ್ಮನ್ನು ತಾವೇ ಹಾಳುಮಾಡಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು