Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:23 - ಕನ್ನಡ ಸಮಕಾಲಿಕ ಅನುವಾದ

23 ಪ್ರಾರಂಭದಲ್ಲಿ ಜಗದುತ್ಪತ್ತಿಗೆ ಮುಂಚೆಯೇ ಅನಾದಿಕಾಲದಲ್ಲಿ ದೇವರು ನನ್ನನ್ನು ಸೃಷ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾನು ಸ್ಥಾಪಿಸಲ್ಪಟ್ಟೆ ಪ್ರಾರಂಭದಲ್ಲೆ ಜಗದುತ್ಪತ್ತಿಗೆ ಮುಂಚೆಯೇ, ಅನಾದಿಕಾಲದಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪ್ರಾರಂಭದಲ್ಲಿ, ಭೂವಿುಯು ಹುಟ್ಟುವದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಆದಿಯಲ್ಲಿ ನಿರ್ಮಾಣಗೊಂಡೆನು. ಪ್ರಪಂಚವು ಆರಂಭವಾಗುವುದಕ್ಕಿಂತ ಮೊದಲೇ ನಾನು ನಿರ್ಮಿತನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:23
10 ತಿಳಿವುಗಳ ಹೋಲಿಕೆ  

“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.


ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ.


ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.


ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು; ನಿನ್ನಲ್ಲಿರುವ ಎಲ್ಲಾ ಸಂಪತ್ತನ್ನು ವ್ಯಯಮಾಡಿದರೂ ತಿಳುವಳಿಕೆಯನ್ನು ಪಡೆದುಕೋ.


ಬೇತ್ಲೆಹೇಮಿನಿಂದ ಒಬ್ಬ ಅಧಿಪತಿಯು ಸೈನ್ಯಗಳ ಪಟ್ಟಣವೇ, ಗುಂಪುಗಳಾಗಿ ಕೂಡಿಕೊಳ್ಳಿರಿ. ನಮ್ಮ ಮೇಲೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು