Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:8 - ಕನ್ನಡ ಸಮಕಾಲಿಕ ಅನುವಾದ

8 ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯುಕ್ತವಾಗಿವೆ; ಮೂರ್ಖತನವಾಗಲಿ, ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ, ವಕ್ರತೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ಮಾತುಗಳೆಲ್ಲ ನೀತಿಭರಿತ ಅವುಗಳಲ್ಲಿ ಇಲ್ಲ ಕುಟಿಲ, ಕುತಂತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ ವಕ್ರತೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಮಾತುಗಳು ನೀತಿಯ ಮಾತುಗಳಾಗಿವೆ. ನನ್ನ ಮಾತುಗಳಲ್ಲಿ ತಪ್ಪಾಗಲಿ ಕಪಟವಾಗಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:8
10 ತಿಳಿವುಗಳ ಹೋಲಿಕೆ  

ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.


ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.


ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.


ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರವನ್ನು ತೊಟ್ಟುಕೊಂಡವನಾಗಿ, ತನ್ನ ಮಹಾ ಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? “ನೀತಿಯನ್ನು ಘೋಷಿಸುವವನೂ, ರಕ್ಷಿಸಲು ಬಲಿಷ್ಠನೂ ನಾನೇ.”


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು.


ಇಸ್ರಾಯೇಲರು ತಮ್ಮನ್ನು ಕೆಡಿಸಿಕೊಂಡರು. ದೇವರ ಮಕ್ಕಳಿಗೆ ತಕ್ಕಂತೆ ನಡೆಯದವರು. ಅವರು ಮೂರ್ಖರಾದ ವಕ್ರ ಸಂತತಿ.


ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.


ಅವರ ಮಾರ್ಗಗಳು ವಕ್ರವಾಗಿವೆ; ತಮ್ಮ ನಡತೆಗಳಲ್ಲಿ ಅವರು ತಪ್ಪಿಹೋಗಿದ್ದಾರೆ.


ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು, ನನ್ನ ಉಪದೇಶವನ್ನು ಬಿಟ್ಟುಬಿಡಬೇಡಿರಿ.


ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು