Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:11 - ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಜ್ಞಾನದ ಮೂಲಕ ನಿನ್ನ ಜೀವನದ ದಿನಗಳು ಹೆಚ್ಚುವುವು; ನಿನ್ನ ಜೀವನದ ವರ್ಷಗಳು ವೃದ್ಧಿಯಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನನ್ನಿಂದ ನಿನಗೆ ಸಿಗುವುದು ದೀರ್ಘಾಯುಸ್ಸು; ವೃದ್ಧಿಯಾಗುವುದು ನಿನ್ನ ಜೀವದ ಅವಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಸ್ಸಿನ ವರುಷಗಳು ವೃದ್ಧಿಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ಜ್ಞಾನಿಯಾಗಿದ್ದರೆ, ಬಹುಕಾಲ ಬದುಕುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:11
7 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರ್ಷಗಳು ಕಡಿಮೆ ಆಗುವವು.


ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ; ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.


ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು, ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.


ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು.


ಹೀಗೆ ಮಾಡಿದರೆ ನಿಮ್ಮ ದಿನಗಳೂ, ನಿಮ್ಮ ಮಕ್ಕಳ ದಿನಗಳೂ ಭೂಮಿಯಲ್ಲಿ ಆಕಾಶದ ದಿನಗಳು ನೆಲೆಯಾಗಿರುವ ಪ್ರಕಾರ, ಯೆಹೋವ ದೇವರು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನೆಲೆಯಾಗಿರುವಿರಿ.


“ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ.


ನಾನು ಜೀವ ಮರಣವನ್ನೂ, ಆಶೀರ್ವಾದ ಶಾಪವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆಂಬುದಕ್ಕೆ ಆಕಾಶವನ್ನೂ, ಭೂಮಿಯನ್ನೂ ಈ ಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ಆದುದರಿಂದ ನೀವೂ, ನಿಮ್ಮ ಸಂತತಿಯೂ, ಬದುಕಿ ಬಾಳುವಂತೆ ಜೀವವನ್ನೇ ಆಯ್ದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು