Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:17 - ಕನ್ನಡ ಸಮಕಾಲಿಕ ಅನುವಾದ

17 “ಕದ್ದ ನೀರು ಸಿಹಿಯಾಗಿದೆ; ರಹಸ್ಯದಲ್ಲಿ ತಿನ್ನುವ ಆಹಾರವು ರುಚಿಯಾಗಿದೆ,” ಎಂದು ಹೇಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಕದ್ದ ನೀರು ಸಿಹಿ, ಗುಟ್ಟಾಗಿ ತಿನ್ನುವ ರೊಟ್ಟಿ ರುಚಿ” ಎಂದು ಬುದ್ಧಿಹೀನನಿಗೆ ಹೇಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನೀವು ಕದ್ದ ನೀರು ಸ್ವಂತ ನೀರಿಗಿಂತಲೂ ಹೆಚ್ಚು ರುಚಿಯಾಗಿರುವುದು. ನೀವು ಕದ್ದ ರೊಟ್ಟಿ ತಯಾರಿಸಿದ ರೊಟ್ಟಿಗಿಂತಲೂ ಹೆಚ್ಚು ರುಚಿಯಾಗಿರುವುದು” ಎಂದು ಹೇಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:17
11 ತಿಳಿವುಗಳ ಹೋಲಿಕೆ  

ವಂಚನೆಯಿಂದ ಸಿಕ್ಕಿದ ಆಹಾರವು ರುಚಿ; ಆದರೆ ಆಮೇಲೆ ಅವನ ಬಾಯಿಯು ಮರಳಿನಿಂದ ತುಂಬುವುದು.


“ಜಾರಸ್ತ್ರೀಯ ನಡತೆಯು ಹೀಗಿದೆ: ಅವಳು ತಿಂದು, ತನ್ನ ಬಾಯನ್ನು ಒರೆಸಿಕೊಂಡು ‘ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಹೇಳುತ್ತಾಳೆ.


ಆ ಅವಿಧೇಯರು ಗುಟ್ಟಾಗಿ ಮಾಡುವ ಕೃತ್ಯಗಳನ್ನು ಹೇಳುವುದಕ್ಕೂ ಅವಮಾನಕರವಾಗಿವೆ.


ಆದರೆ ಪಾಪವು, ಆ ಆಜ್ಞೆಯಿಂದ ಅನುಕೂಲ ಹೊಂದಿ ನನ್ನಲ್ಲಿ ಎಲ್ಲಾ ವಿಧದ ಆಶೆಗಳನ್ನು ಉಂಟುಮಾಡಿತು. ಏಕೆಂದರೆ ನಿಯಮವಿಲ್ಲದೆ ಪಾಪವು ಸತ್ತದ್ದಾಗಿರುತ್ತದೆ.


ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.


ನಿನ್ನ ಬುಗ್ಗೆಗಳು ಬೀದಿಗಳಲ್ಲಿ ಹರಡುವುದು ಯುಕ್ತವೋ? ನೀರಿನ ಒರತೆಗಳು ಬೀದಿಚೌಕಗಳಲ್ಲಿ ಹರಿಯುವುದು ಸರಿಯೇ?


ನಿನ್ನ ಬುಗ್ಗೆಯು ಆಶೀರ್ವಾದ ಹೊಂದಲಿ; ನಿನ್ನ ಆನಂದವು ಯೌವನದ ಕಾಲದ ಹೆಂಡತಿಯೊಂದಿಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು