Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:5 - ಕನ್ನಡ ಸಮಕಾಲಿಕ ಅನುವಾದ

5 “ಬಾ, ನನ್ನ ಆಹಾರವನ್ನು ತಿಂದು, ನಾನು ಬೆರೆಸಿದ ದ್ರಾಕ್ಷಾರಸವನ್ನು ಕುಡಿ,” ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಬನ್ನಿ, ನಾ ಬಡಿಸುವ ಆಹಾರವನ್ನು ಉಣಬನ್ನಿ; ನಾ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಬನ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಬನ್ನಿರಿ, ನನ್ನ ಜ್ಞಾನದ ಆಹಾರವನ್ನು ತಿನ್ನಿರಿ. ನಾನು ತಯಾರಿಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:5
10 ತಿಳಿವುಗಳ ಹೋಲಿಕೆ  

ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


“ಕದ್ದ ನೀರು ಸಿಹಿಯಾಗಿದೆ; ರಹಸ್ಯದಲ್ಲಿ ತಿನ್ನುವ ಆಹಾರವು ರುಚಿಯಾಗಿದೆ,” ಎಂದು ಹೇಳುತ್ತಾಳೆ.


ಆಕೆಯು ಮಾಂಸದ ಆಹಾರನ್ನು ತಯಾರಿಸಿ, ತನ್ನ ದ್ರಾಕ್ಷಾರಸವನ್ನು ಬೆರೆಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.


ಭೂಮಿಯ ಶ್ರೀಮಂತರೆಲ್ಲರು ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರು ಅವರ ಮುಂದೆ ಅಡ್ಡಬೀಳುವರು.


ದೀನರು ಉಂಡು ತೃಪ್ತರಾಗುವರು; ಯೆಹೋವ ದೇವರನ್ನು ಹುಡುಕುವವರು ಅವರನ್ನು ಸ್ತುತಿಸುವರು; ಅಂಥವರ ಹೃದಯವು ಎಂದೆಂದಿಗೂ ಚೈತನ್ಯ ಹೊಂದಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು