ತೀತನಿಗೆ 1:1 - ಕನ್ನಡ ಸಮಕಾಲಿಕ ಅನುವಾದ1 ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1-4 ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1-4 ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರ ಸೇವಕನಾದ ಮತ್ತು ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ದೇವರು ಆರಿಸಿಕೊಂಡ ಜನರ ನಂಬಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಮತ್ತು ಅವರಿಗೆ ಸತ್ಯವನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಲಾಯಿತು. ದೇವರ ಸೇವೆಯನ್ನು ಹೇಗೆ ಮಾಡಬೇಕೆಂಬುದನ್ನು ಆ ಸತ್ಯವು ತೋರ್ಪಡಿಸುತ್ತಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ದೆವಾಚೊ ಸೆವಕ್ ಅನಿ ಜೆಜು ಕ್ರಿಸ್ತಾಚೊ ಅಪೊಸ್ತಲ್ ಹೊವ್ನ್ ಹೊತ್ತ್ಯಾ ಪಾವ್ಲು, ವಿಶ್ವಾಸಾತ್ ದೆವಾಚಿ ಮನುನ್ ಅಸಲ್ಲ್ಯಾ ಲೊಕಾಕ್ನಿ ಮಜತ್ ಕರುಕ್ ಅನಿ ಅಮ್ಚ್ಯಾ ದೆವಸ್ಪಾನ್ ಶಿಕ್ವಲ್ಲ್ಯಾ ಖರ್‍ಯಾ ಶಿಕಾಪಾಚ್ಯಾ ವಾಟೆನ್ ಚಲ್ತಲ್ಯಾಕ್ನಿ ಚಾಲ್ವುನ್ ನ್ಹೆವ್ಕ್ ಮನುನ್ ಎಚುನ್ ಕಾಡಲ್ಲೊ. ಅಧ್ಯಾಯವನ್ನು ನೋಡಿ |