Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:10 - ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ, ಅನೇಕ ದಂಗೆಕೋರ ಜನರೂ ಬರೀ ಮಾತನಾಡುವವರೂ ಮೋಸಗೊಳಿಸುವವರೂ ಮುಖ್ಯವಾಗಿ ಸುನ್ನತಿಯಾಗಬೇಕೆಂದು ಹೇಳುವ ಗುಂಪಿನವರೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇತ್ತೀಚೆಗೆ ಅವಿಧೇಯರು, ಜೊಳ್ಳು ಮಾತಿನವರು ಹಾಗೂ ವಂಚಕಬೋಧಕರು ತಲೆ ಎತ್ತಿದ್ದಾರೆ. ಅವರಲ್ಲಿ ಕ್ರೈಸ್ತರಾಗಿರುವ ಯೆಹೂದ್ಯರು ಸಾಕಷ್ಟು ಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅನೇಕರು ಬರೀ ಮಾತಿನವರಾಗಿಯೂ ಮೋಸಗಾರರಾಗಿಯೂ ಇದ್ದು ಅಧಿಕಾರಕ್ಕೆ ಒಳಗಾಗದವರಾಗಿದ್ದಾರೆ; ಅವರೊಳಗೆ ಹೆಚ್ಚು ಜನರು ಸುನ್ನತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಪ್ನಾಚಿ ಜವಾಬ್ದಾರಿ ಸಂಬಾಳಿನಸ್ತಾನಾ ರ್‍ಹಾತಲಿ ಲೈ ಲೊಕಾ ಅಮ್ಚ್ಯಾ ಮದ್ದಿ ಹಾತ್, ಲೈ ಕರುನ್ ಜುದೆವಾಂಚ್ಯಾ ಘರಾನ್ಯಾತ್ನಾ ಪರಿರ್ವತನ್ ಹೊವ್ನ್ ಕ್ರಿಸ್ತಾಚ್ಯಾ ಫಾಟ್ನಾ ಯೆಲ್ಲೆ, ಎಕ್ಲ್ಯಾಕ್ನಿ ವಿರೊದ್ ಹೊವ್ಕ್ ಉಮ್ಮೆದ್ ಭರ್‍ತಲೆ, ಹೆನಿ ಸಗ್ಳೆ ಜಾನಾ ಪೊಕಳ್ ಗೊಸ್ಟಿಯಾನಿ ಲೊಕಾಕ್ನಿ ಮಳ್ಳ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:10
29 ತಿಳಿವುಗಳ ಹೋಲಿಕೆ  

ಕೆಲವರು ಇವುಗಳನ್ನು ಬಿಟ್ಟುಬಿಟ್ಟು ವ್ಯರ್ಥವಾದ ಮಾತುಗಳಿಗೆ ತಿರುಗಿಕೊಂಡಿದ್ದಾರೆ.


ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.


ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.


ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.


ಆದ್ದರಿಂದ ಪೇತ್ರನು ಯೆರೂಸಲೇಮಿಗೆ ಹೋದಾಗ ಸುನ್ನತಿಯಾದವರು ಅವನೊಂದಿಗೆ ವಾಗ್ವಾದಮಾಡಿ,


ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು. ಅದೇನೆಂದರೆ ನಾನು ಹಗೆ ಮಾಡುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ಹಗೆ ಮಾಡುತ್ತೀ.


ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳಿದ್ದಾರೆ. ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.


ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.


ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ.


ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ?


ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು.


ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.


ನಮ್ಮಿಂದ ಕೆಲವರು ನಮ್ಮ ಅಪ್ಪಣೆಯಿಲ್ಲದೆ ತಮ್ಮ ಮಾತುಗಳಿಂದ ನಿಮ್ಮ ಮನಸ್ಸಿಗೆ ತೊಂದರೆ ಕೊಟ್ಟರೆಂದು ನಾವು ಕೇಳಿದೆವು.


ನಿಯಮವು ನೀತಿವಂತರಿಗೋಸ್ಕರ ಅಲ್ಲ. ಬದಲಿಗೆ ಅದು ಅವಿಧೇಯರಿಗೆ, ಅಕ್ರಮಗಾರರಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಅಪವಿತ್ರರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ, ಕೊಲೆಗಾರರಿಗೆ,


ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು.


ಒಬ್ಬನು, “ನಾನು ಅವರನ್ನು ಬಲ್ಲೆನು,” ಎಂದು ಹೇಳಿ ಅವರ ಆಜ್ಞೆಗಳನ್ನು ಕೈಗೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವು ಅವನಲ್ಲಿ ಇಲ್ಲ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ. ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ. ಆದ್ದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು