Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:14 - ಕನ್ನಡ ಸಮಕಾಲಿಕ ಅನುವಾದ

14 ಅವರು ಯೆಹೂದ್ಯರ ಕಟ್ಟುಕಥೆಗಳಿಗೂ ಸತ್ಯದಿಂದ ದೂರಮಾಡುವ ಮಾನವರ ಆಜ್ಞೆಗಳಿಗೂ ಲಕ್ಷ್ಯಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದ್ದರಿಂದ ಯೆಹೂದ್ಯರ ಕಟ್ಟುಕತೆಗಳಿಗೂ ಸತ್ಯಭ್ರಷ್ಟರಾದವರ ವಿಧಿಗಳಿಗೂ ಕಿವಿಗೊಡದಂತೆ ತೀವ್ರವಾಗಿ ಖಂಡಿಸಿ, ವಿಶ್ವಾಸದಲ್ಲಿ ದೃಢವಾಗಿರುವಂತೆ ಭಕ್ತಾದಿಗಳಿಗೆ ಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದ್ಯರ ಕಟ್ಟುಕಥೆಗಳನ್ನು ಒಪ್ಪಿಕೊಳ್ಳುವುದಿಲ್ಲ ಮತ್ತು ಸತ್ಯವನ್ನು ಒಪ್ಪಿಕೊಳ್ಳದ ಜನರ ಆಜ್ಞೆಗಳನ್ನು ಅನುಸರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜುದೆವಾಂಚ್ಯಾ ಕಾನಿಯಾಕ್ನಿ ಅನಿ ಖರ್‍ಯಾ ಪಾನಾಕ್ನಾ ಧುರ್ ನ್ಹೆತಲ್ಯಾ ಹುಕುಮಾಕ್ನಿ ಧ್ಯಾನ್ ದಿವ್ನಕೊ, ತೆ ಖರೆಪಾನಾಕ್ ನಕ್ಕೊ ಮನುನ್ ಸೊಡಲ್ಲೆ ಹಾಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:14
10 ತಿಳಿವುಗಳ ಹೋಲಿಕೆ  

ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.


ಈ ಶಾಸನಗಳು ಮಾನವ ಆಜ್ಞೆಗಳ ಹಾಗೂ ಬೋಧನೆಗಳ ಅನುಸಾರವಾಗಿ ಬಳಕೆಯಿಂದ ಅಳಿದುಹೋಗುತ್ತವೆ!


“ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡಲು ತಿರುಗಿಕೊಂಡಿತು!” ಎಂಬ ನಿಜವಾದ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.


ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?


ಅವರು ಮನುಷ್ಯರ ಆಜ್ಞೆಗಳನ್ನು ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ಆರಾಧಿಸುವುದು ವ್ಯರ್ಥ.’”


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಮನುಷ್ಯರ ಆಜ್ಞೆಗಳನ್ನೇ ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುತ್ತಾರೆ.’


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಅಂಥವರು ಸನ್ಮಾರ್ಗ ತಪ್ಪಿದವರೂ ತಮ್ಮನ್ನು ತಾವೇ ಖಂಡಿಸಿಕೊಳ್ಳುವವರಾಗಿ ಪಾಪಮಾಡುವವರೂ ಆಗಿದ್ದಾರೆಂದು ನಿಶ್ಚಯವಾಗಿ ತಿಳಿದುಕೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು